ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಖಾತರಿ : ಸಚಿವರ ಅತೃಪ್ತಿ

Last Updated 2 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವುದು ಹಾಗೂ ಕೆಲಸ ಇಲ್ಲದವರಿಗೆ ಉದ್ಯೋಗ ನೀಡುವ ಯುಪಿಎ ಸರ್ಕಾರದ ಮಹತ್ವಾಕಾಂಕ್ಷಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ಅನುಷ್ಠಾನ ಕೆಲವು ರಾಜ್ಯಗಳಲ್ಲಿ ತೇಪೆ ಹಾಕುವ ಕಾರ್ಯಕ್ಕೆ ಬಳಕೆಯಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜೈರಾಂ ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಯೋಜನೆಗೆ ನಿಗದಿ ಮಾಡಿರುವ ಹಣ ಸದ್ಬಳಕೆಯಾಗದೇ ದುರುಪಯೋಗ ಆಗುತ್ತಿದೆ. ಯೋಜನೆ ಅನುಷ್ಠಾನದಲ್ಲಿ ಸಾಕಷ್ಟು ನ್ಯೂನತೆಗಳಿವೆ ಎಂದೂ ಅವರು ಆತಂಕ ವ್ಯಕ್ತಪಡಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT