ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆ: ಮತ ಯಂತ್ರಗಳ ವಿತರಣೆ

Last Updated 25 ಸೆಪ್ಟೆಂಬರ್ 2011, 19:50 IST
ಅಕ್ಷರ ಗಾತ್ರ

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಎಲೆಕ್ಟ್ರಾನಿಕ್ ಮತ ಯಂತ್ರಗಳು, ಚುನಾವಣಾ ಸಾಮಗ್ರಿ ಹಂಚಿಕೆ ಕಾರ್ಯ ಭಾನುವಾರ ಇಲ್ಲಿನ ಗವಿಸಿದ್ದೇಶ್ವರ ಪದವಿ ಕಾಲೇಜಿನಲ್ಲಿ ನಡೆಯಿತು.

ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಉಸ್ತುವಾರಿಯಲ್ಲಿ ಚುನಾವಣಾ ಸಿಬ್ಬಂದಿಗೆ ಈ ಸಾಮಗ್ರಿ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಒಟ್ಟು 210 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು. ಈ ಪೈಕಿ 94 ಮತದಾನ ಕೇಂದ್ರಗಳನ್ನು ಅತಿಸೂಕ್ಷ್ಮ, 65 ಸೂಕ್ಷ್ಮ ಹಾಗೂ 51 ಸಾಮಾನ್ಯ ಎಂದು ವಿಂಗಡಿಸಲಾಗಿದೆ ಎಂದರು.

ವಿವಿಧ ಹಂತದಲ್ಲಿ 840 ಹಾಗೂ ಶೇ 10ರಷ್ಟು ಕಾಯ್ದಿರಿಸಿದ ಸಿಬ್ಬಂದಿ ಸೇರಿದಂತೆ ಈ ಉಪ ಚುನಾವಣೆಯಲ್ಲಿ ಒಟ್ಟು 924 ಜನ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. ಸಾರಿಗೆ ಸಂಸ್ಥೆಯ 25 ಬಸ್, 16 ಮ್ಯಾಕ್ಸಿಕ್ಯಾಬ್, 72 ಜೀಪ್‌ಗಳು ಹಾಗೂ 1 ಲಾರಿಯನ್ನು ಚುನಾವಣಾ ಕಾರ್ಯಕ್ಕೆ ಬಳಸಲಾಗುತ್ತಿದೆ ಎಂದರು. 210 ಎಲೆಕ್ಟ್ರಾನಿಕ್ ಮತದಾನ ಯಂತ್ರಗಳಲ್ಲದೇ 21 ಯಂತ್ರಗಳನ್ನು ಕಾಯ್ದಿರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT