ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಮುಖ್ಯಮಂತ್ರಿ ಹುದ್ದೆಗೆ ಸಂವಿಧಾನದ ಮಾನ್ಯತೆ ಇಲ್ಲ

Last Updated 26 ಜುಲೈ 2012, 19:25 IST
ಅಕ್ಷರ ಗಾತ್ರ

ಬೆಂಗಳೂರು: `ಉಪ ಮುಖ್ಯಮಂತ್ರಿ~ ಸ್ಥಾನಕ್ಕೆ ಸಂವಿಧಾನದ ಮಾನ್ಯತೆ ಇಲ್ಲದ ಕಾರಣ, ವಿಧಾನ ಪರಿಷತ್ತಿನ ವ್ಯವಹಾರಗಳಲ್ಲಿ ಆ ಪದ ಬಳಸಬಾರದು ಎಂದು ಜೆಡಿಎಸ್‌ನ ಎಂ.ಸಿ. ನಾಣಯ್ಯ ಗುರವಾರ ಆಗ್ರಹಿಸಿದರು. ರಾಜಕೀಯ ಹೊಂದಾಣಿಕೆಗಳ ಕಾರಣ ಈ ಹುದ್ದೆ ಸೃಷ್ಟಿಯಾಗಿದೆ ಎಂದರು.

ಆಗ ಮಧ್ಯಪ್ರವೇಶ ಮಾಡಿದ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, `ಹಿಂದೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ರಾಜ್ಯವನ್ನಾಳಿದ ಸಂದರ್ಭದಲ್ಲೂ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗಿದೆ. ದೇಶದ ಬೇರೆ ರಾಜ್ಯಗಳಲ್ಲೂ ಇದು ಇದೆ~ ಎಂದರು.

ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮಾತನಾಡಿ, `ಇದು ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಸಬೇಕಾದ ವಿಷಯ. ಇಲ್ಲಿ ಮಾತ್ರವಲ್ಲ~ ಎಂದು ಹೇಳಿ ಚರ್ಚೆಗೆ ಅಂತ್ಯ ಹಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT