ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳುಮೆ ಚೀಟಿ ನೀಡಲು ಒತ್ತಾಯ

Last Updated 22 ಫೆಬ್ರುವರಿ 2012, 19:40 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಉತ್ತರ ತಾಲ್ಲೂಕಿನಲ್ಲಿರುವ ರೈತರಿಗೆ ಉಳುಮೆ ಚೀಟಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿ ರಾಜ್ಯ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್) ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಧರಣಿ ನಡೆಸಿದರು.

ಸಂಘದ ಅಧ್ಯಕ್ಷ ಎನ್. ವೆಂಕಟಾಚಲಯ್ಯ ಮಾತನಾಡಿ `ನಗರದ ಉತ್ತರ ತಾಲ್ಲೂಕಿನಲ್ಲಿ ಬಡ ರೈತರು ಮತ್ತು ಕೂಲಿಕಾರರು ಹಲವಾರು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಬಗರ್‌ಹುಖುಂ ಸಾಗುವಳಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಸರ್ಕಾರ ಹಲವು ಕಾರಣಗಳನ್ನು ಹೇಳಿ, ಅವರಿಗೆ ಉಳುಮೆ ಚೀಟಿ ನೀಡಲು ನಿರಾಕರಿಸುತ್ತಿದೆ~ ಎಂದು ಆರೋಪಿಸಿದರು.

ಉಳುಮೆ ಚೀಟಿ ನೀಡುವಂತೆ ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ರೈತರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಸರ್ಕಾರದಿಂದ ಇದಕ್ಕೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಕೆಲವರಿಗೆ ಉಳುಮೆ ಚೀಟಿ ನೀಡಿದ್ದರೂ ಅದು ನಕಲಿ ಎಂದು ಹೇಳಿ ರೈತರ ಮೇಲೆ ಮೊಕದ್ದಮೆ ದಾಖಲು ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯಿಂದ 18 ಕಿ.ಮೀ ದೂರದಲ್ಲೇ ಈ ರೈತರು ನೆಲೆಸಿದ್ದಾರೆ ಎಂದು ನೆಪ ಹೇಳಿ, ಉಳುಮೆ ಚೀಟಿ ನೀಡಲು ನಿರಾಕರಿಸಲಾಗುತ್ತಿದೆ ಎಂದು ದೂರಿದರು.

ಈ ಭಾಗದ ಹಲವು ರೈತರಿಗೆ ನಿವೇಶನಗಳಿಲ್ಲ. ಆದ್ದರಿಂದ ಅವರಿಗೆ ನಿವೇಶನಗಳನ್ನು ನಿರ್ಮಿಸಿ ಕೊಡಬೇಕು ಎಂಬ ಹಲವು ಬೇಡಿಕೆಗಳಿಗೆ ಪ್ರತಿಭಟನಾಕಾರರು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಗಿದ್ದು ಶೀಘ್ರವೇ ಈ ಕುರಿತು ಸಭೆ ನಡೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವೆಂಕಟಾಚಲಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT