ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಟನೇ ಸ್ಥಾನಕ್ಕೆ ಕುಸಿದ ಸೈನಾ

Last Updated 19 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ/ಐಎಎನ್‌ಎಸ್‌): ಲಂಡನ್‌ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ವಿಶ್ವ ಬ್ಯಾಡ್ಮಿಂಟನ್‌ ರ್‍ಯಾಂಕಿಂಗ್‌ನಲ್ಲಿ ಎಂಟನೇ ಸ್ಥಾನಕ್ಕೆ ಕುಸಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸತತ ವೈಫಲ್ಯ ಕಾಣುತ್ತಿರುವ ಅವರು ಈ ವರ್ಷ ಒಂದೂ ಪ್ರಶಸ್ತಿ ಜಯಿಸಿಲ್ಲ.

ಸೈನಾ ಹೋದ ವರ್ಷ ಎರಡನೇ ಸ್ಥಾನಕ್ಕೇರಿದ್ದರು. ಆದರೆ ಈ ತಿಂಗಳ ಆರಂಭದಲ್ಲಿ ಆರನೇ ಸ್ಥಾನಕ್ಕೆ ಕುಸಿದಿದ್ದರು. ಈಗ ಮತ್ತೆ ಎರಡು ಸ್ಥಾನ ಕೆಳಗಿಳಿದಿದ್ದಾರೆ. ಇತ್ತೀಚೆಗೆ ಕ್ವಾಲಾಲಂಪುರದಲ್ಲಿ ನಡೆದ ಬಿಡಬ್ಲ್ಯುಎಫ್‌ ಸೂಪರ್‌ ಸರಣಿ ಫೈನಲ್ಸ್‌ ಟೂರ್ನಿಯ ಲೀಗ್‌ ಹಂತದಲ್ಲೇ ಸೋಲು ಕಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT