ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಟು ಬೇಡಿಕೆಗೆ ಅಸ್ತು

Last Updated 21 ಫೆಬ್ರುವರಿ 2011, 17:25 IST
ಅಕ್ಷರ ಗಾತ್ರ

ಭುವನೇಶ್ವರ (ಪಿಟಿಐ): ಮಾವೊವಾದಿಗಳ ಒತ್ತಡಕ್ಕೆ ಮಣಿದಿರುವ ಒಡಿಶಾ ಸರ್ಕಾರ ನಕ್ಸಲರ 14 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲು ಸೋಮವಾರ ಸಮ್ಮತಿಸಿದೆ.

ಉಳಿದ ಆರು ಬೇಡಿಕೆಗಳನ್ನು ಮಂಗಳವಾರ ಬೆಳಿಗ್ಗೆ ನಡೆಯಲಿರುವ ಅಂತಿಮ ಸುತ್ತಿನ ಮಾತುಕೆಯಲ್ಲಿ ಪರಿಶೀಲಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಮಾವೊವಾದಿಗಳು ಅಪಹರಿಸಿರುವ ಮಾಲ್ಕನ್‌ಗಿರಿ ಜಿಲ್ಲಾಧಿಕಾರಿ ಆರ್.ವಿ.ಕೃಷ್ಣ ಹಾಗೂ ಕಿರಿಯ ಎಂಜಿನಿಯರ್ ಪವಿತ್ರಾ ಮಝಿ ಅವರನ್ನು ಶೀಘ್ರವೇ ಬಿಡುಗಡೆ ಮಾಡುವ ಭರವಸೆ ತಮಗಿದೆ ಎಂದು ಮಾವೊವಾದಿಗಳ ಮಧ್ಯಸ್ಥಗಾರರ ಜೊತೆ ಮಾತುಕತೆ ನಡೆಸಿರುವ ಗೃಹ ಇಲಾಖೆಯ ಕಾರ್ಯದರ್ಶಿ ಯು.ಎನ್.ಬೆಹೆರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಾವೊವಾದಿಗಳ ಪರ ಮಧ್ಯವರ್ತಿಗಳಾಗಿ ಪ್ರೊ.ಜಿ.ಹರಗೋಪಾಲ್, ಪ್ರೊ.ಸೋಮೇಶ್ವರ ರಾವ್ ಹಾಗೂ ದಂಡಪಾಣಿ ಮೊಹಂತಿ ಸರ್ಕಾರದ ಜೊತೆ ಮಾತುಕತೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT