ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ

Last Updated 6 ಜನವರಿ 2014, 19:56 IST
ಅಕ್ಷರ ಗಾತ್ರ

ಬೆಂಗಳೂರು: ಆಡುಗೋಡಿ ಸಮೀಪದ ಸುಬ್ಬಣ್ಣ ಗಾರ್ಡನ್‌ನಲ್ಲಿರುವ ಸೇಂಟ್‌ ಹಾಪ್ಕಿನ್ಸ್‌ ಕಾಲೇಜಿನ ಎಂಬಿಎ ವಿದ್ಯಾರ್ಥಿ ಅಮನ್‌ಕುಮಾರ್‌ (24) ಎಂಬುವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉತ್ತರಪ್ರದೇಶ ಮೂಲದ ಅಮನ್‌­ಕುಮಾರ್‌, ಎಂಬಿಎ ಮೂರನೇ ಸೆಮಿಸ್ಟರ್‌ ಓದುತ್ತಿದ್ದರು.

ಕಾಲೇಜಿನ ಆವರಣದಲ್ಲಿರುವ ವಿದ್ಯಾರ್ಥಿನಿಲಯದಲ್ಲಿ ವಾಸವಾಗಿದ್ದ ಅವರು ಕೊಠಡಿಯಲ್ಲಿ ನೇಣು ಹಾಕಿ­ಕೊಂಡಿ­ದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

‘ಪೋಷಕರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಅಮನ್‌­ಕುಮಾರ್‌ ಪತ್ರ ಬರೆ­ದಿಟ್ಟಿ­ದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಅಶೋಕನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಚಿನ್ನಾಭರಣ ಕಳವು
ವಿಜಯನಗರ ಬಳಿಯ ಮಾರೇನ­ಹಳ್ಳಿ ಎರಡನೇ ಮುಖ್ಯರಸ್ತೆ ನಿವಾಸಿ ಚಂದ್ರಶೇಖರ್‌ ಎಂಬುವರ ಮನೆಯಲ್ಲಿ ದುಷ್ಕರ್ಮಿಗಳು ಚಿನ್ನಾ­ಭರಣ ಸೇರಿ­ದಂತೆ ಸುಮಾರು ₨ 4 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.

ಚಂದ್ರಶೇಖರ್‌ ಅವರು ಮನೆಯ ಬೀಗದ ಕೀಯನ್ನು ಬಾಗಿಲಿನ ಪಕ್ಕದ ಪೆಟ್ಟಿಗೆಯಲ್ಲಿಟ್ಟು ಕುಟುಂಬ ಸದಸ್ಯ­ರೊಂದಿಗೆ ಭಾನುವಾರ ಸಿನಿಮಾಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.

ಕಳ್ಳರು ಆ ಬೀಗದ ಕೀಯಿಂದ ಮನೆಯ ಬಾಗಿಲು ತೆರೆದು ಒಳನುಗ್ಗಿ ಅಲ್ಮೇರಾದಲ್ಲಿದ್ದ 170 ಗ್ರಾಂ ಚಿನ್ನಾಭರಣ ಮತ್ತು 200 ಗ್ರಾಂ ಬೆಳ್ಳಿ ವಸ್ತು­ಗಳನ್ನು ದೋಚಿಕೊಂಡು ಪರಾರಿ­ಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT