ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ದಂಪತಿ ಕೋರ್ಟ್‌ಗೆ ಹಾಜರ್, ಸೆ 24ಕ್ಕೆ ಪ್ರಕರಣ ಮುಂದೂಡಿಕೆ

Last Updated 9 ಸೆಪ್ಟೆಂಬರ್ 2011, 5:25 IST
ಅಕ್ಷರ ಗಾತ್ರ

 ಬೆಂಗಳೂರು: ವಕೀಲ ವಿನೋದ್‌ಕುಮಾರ್ ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕೊನೆಗೂ ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾದರು.

ನಂತರ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸುಧೀಂದ್ರರಾವ್ ಅವರು, ಪ್ರಕರಣದ ವಿಚಾರಣೆಯನ್ನು ಸೆ. 24ಕ್ಕೆ ಮುಂದೂಡಿದರು.

ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗ ಜಂತಕಲ್ ಗಣಿ ಕಂಪೆನಿಗೆ ಕಾನೂನು ಬಾಹಿರವಾಗಿ ಗಣಿ ಗುತ್ತಿಗೆ ನವೀಕರಣಕ್ಕೆ ಶಿಫಾರಸು ಮಾಡಿರುವುದು ಮತ್ತು ಜೊತೆಗೆ ಪಕ್ಷಪಾತದಿಂದ ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಭೂಮಿ ಮಂಜೂರು ಮಾಡಿ ಪ್ರತಿಯಾಗಿ ಅನಿತಾ ಕುಮಾರ ಸ್ವಾಮಿ ಅವರ ಹೆಸರಿನಲ್ಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ವಕೀಲ ವಿನೋದ್‌ಕುಮಾರ್ ಅವರು, ಅವರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು

ಈ ಹಿಂದೆ ಎರಡು ಬಾರಿಯೂ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಕೈಗೆತ್ತಿಕೊಂಡಾಗ ಕುಮಾರಸ್ವಾಮಿ ದಂಪತಿ ನ್ಯಾಯಾಲಯದಿಂದ ದೂರ ಉಳಿದಿದ್ದರು. ಖುದ್ದು ಹಾಜರಾದರೆ ಎಲ್ಲಿ ಬಂಧನಕ್ಕೊಳಗಾಗ ಬೇಕಾಗಬಹುದು ಎಂಬ ಆತಂಕದಿಂದ ಅವರು ಹೈಕೋರ್ಟ್ ಬಾಗಿಲು ತಟ್ಟಿದ್ದರು. ಗುರುವಾರ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್, ಶುಕ್ರವಾರ ಲೋಕಾಯುಕ್ತರ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಿರಬೇಕು ಎಂದು ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT