ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡಪಕ್ಷಗಳಿಗೆ ಎನ್‌ಡಿಎ ಬೆಂಬಲ?

Last Updated 20 ನವೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಬೆಲೆ ಏರಿಕೆಗೆ ಸಂಬಂಧಿಸಿದಂತೆ ತಾನು ಈ ಹಿಂದೆ ಮಂಡಿಸಲು ಉದ್ದೇಶಿಸಿದ್ದ ಅವಿಶ್ವಾಸ ಗೊತ್ತುವಳಿಗೆ ಬದಲು ಎಡಪಕ್ಷಗಳು ಸಂಸತ್‌ನಲ್ಲಿ ಮಂಡಿಸುವ ನಿಲುವಳಿ ಸೂಚನೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲ ಸೂಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

`ಬೆಲೆ ಏರಿಕೆ ಹಾಗೂ ಹಣದುಬ್ಬರ ವಿಷಯಕ್ಕೆ ಸಂಬಂಧಿಸಿದಂತೆ ನಿಲುವಳಿ ಸೂಚನೆ ಮಂಡಿಸಲು ಎಲ್ಲ ವಿರೋಧ ಪಕ್ಷಗಳೂ ಒಪ್ಪಿಕೊಂಡಿವೆ. ಅವಿಶ್ವಾಸ ಗೊತ್ತುವಳಿಯನ್ನು ಕೇವಲ ರಾಜಕೀಯ ಅಭಿಪ್ರಾಯವಾಗಿ ಮಾತ್ರವೇ ಪರಿಗಣಿಸಲಾಗುತ್ತದೆ~ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ಬಿಜೆಪಿ ಜತೆ ಗುರುತಿಸಿಕೊಳ್ಳಲು ಇಷ್ಟವಿಲ್ಲದ ಕಾರಣ ಎನ್‌ಡಿಎ ಮಂಡಿಸುವ ಅವಿಶ್ವಾಸ ಗೊತ್ತುವಳಿಗೆ ಕೆಲ ವಿರೋಧ ಪಕ್ಷಗಳು ಬೆಂಬಲ ಸೂಚಿಸದೇ ಇರುವ ಸಾಧ್ಯತೆ ಕೂಡ ಇದೆ.

`ಬೆಲೆ ಏರಿಕೆ ಬಗ್ಗೆ ವಿರೋಧ ಪಕ್ಷಗಳು ಭಾರಿ ಕಳವಳ ವ್ಯಕ್ತಪಡಿಸಿವೆ~ ಎಂದು ಸಿಪಿಐನ ಗುರುದಾಸ್ ದಾಸ್‌ಗುಪ್ತ ಹೇಳಿದ್ದಾರೆ. ಮಂಗಳವಾರದಿಂದ ಆರಂಭವಾಗಲಿರುವ ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಅವರು ಬೆಲೆ ಏರಿಕೆ ಕುರಿತಂತೆ ನಿಲುವಳಿ ಸೂಚನೆ ಮಂಡಿಸಲಿದ್ದಾರೆ.
 

ಉನ್ನತ ಶಿಕ್ಷಣ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ (ಪಿಟಿಐ): ಉನ್ನತ ಶಿಕ್ಷಣ ಕೇತ್ರದಲ್ಲಿ ಮಹತ್ತರ ಬದಲಾವಣೆ ತರುವ ಉದ್ದೇಶದಿಂದ ರೂಪಿಸಲಾಗಿರುವ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಮಂಡಳಿ ಮಸೂದೆ- 2010 ಸೇರಿದಂತೆ ಈ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಮಸೂದೆಗಳನ್ನು ಕೇಂದ್ರ ಸರ್ಕಾರ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ. ಮಸೂದೆಗಳಿಗೆ ಅಂಗೀಕಾರ ಪಡೆಯುವ ನಿಟ್ಟಿನಲ್ಲಿ ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್ ಈಗಾಗಲೇ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ಜತೆ ಚರ್ಚೆ ನಡೆಸಿದ್ದಾರೆ.


ಒಂದು ಸ್ಥಾನ ತೆರವು ಹಾಗೂ ಅಧ್ಯಕ್ಷರನ್ನು ಹೊರತುಪಡಿಸಿದರೆ ಸದ್ಯ ಲೋಕಸಭೆಯ ಬಲಾಬಲ 543.  ಅವಿಶ್ವಾಸ ಗೊತ್ತುವಳಿಗೆ 272 ಸರಳ ಬಹುಮತ ಬೇಕಾಗುತ್ತದೆ. ಆದರೆ ಇದು ವಿರೋಧ ಪಕ್ಷಗಳಿಗೆ ಅಸಾಧ್ಯವಾದ ಕೆಲಸವಾಗುತ್ತದೆ.

ಮತದಾನಕ್ಕೆ ಅವಕಾಶ ಇರುವ ನಿಲುವಳಿ ಸೂಚನೆಗಾದರೆ 250ಕ್ಕಿಂತ ಹೆಚ್ಚು ಮತಗಳಲ್ಲಿ ಗೆಲ್ಲಬಹುದು ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.  ಒಟ್ಟು 43 ಸದಸ್ಯರಿರುವ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಇದಕ್ಕೆ ಬೆಂಬಲ ನೀಡುವ ಸಾಧ್ಯತೆ ಇದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT