ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್ನೆಸ್ಸೆಸ್‌ನಿಂದ ಸೌಹಾರ್ದ ವೃದ್ಧಿ

Last Updated 11 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಕುಶಾಲನಗರ: `ಎನ್ನೆಸ್ಸೆಸ್ ಶಿಬಿರಗಳು ಸಮಾಜದಲ್ಲಿ ಏಕತೆ, ಸೌಹಾರ್ದ ಬೆಳೆಸುವಲ್ಲಿ ಸಹಕಾರಿಯಾಗಿವೆ~ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಎಸ್.ಪಿ.ಚರಿತಾ ಅಭಿಪ್ರಾಯಪಟ್ಟರು.

ಸರ್ಕಾರಿ ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಇಲ್ಲಿನ ಬೈಚನಹಳ್ಳಿಯಲ್ಲಿ `ಜಲ- ವನ ಸಂವರ್ಧನೆ~ ವಿಷಯದಡಿ ಹಮ್ಮಿಕೊಂಡಿರುವ ವಾರ್ಷಿಕ ಶಿಬಿರ ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಶಿಬಿರಾಧಿಕಾರಿ ಎಚ್.ಕೆ.ತಿಲಗಾರ್, ಶ್ರಮದಾನದ ಚಟುವಟಿಕೆಗಳ ಕುರಿತು ತಿಳಿಸಿದರು. ಪ್ರಾಂಶುಪಾಲ ಜಿ.ಕೆ.ರಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಎಪಿಸಿಎಂಎಸ್ ಅಧ್ಯಕ್ಷ ಎಂ.ಎನ್.ಕುಮಾರಪ್ಪ ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಪ.ಪಂ.ಸದಸ್ಯೆ ಕೆ.ಆರ್.ರೇಣುಕಾ, ತಾ.ಪಂ.ಸದಸ್ಯ ಬಿ.ವಿ.ಸತೀಶ್, ಎಸ್‌ಡಿಎಂಸಿ ಅಧ್ಯಕ್ಷ ಶೇಖರ್ ನಾಯಕ್, ಮುಖ್ಯ ಶಿಕ್ಷಕಿ ಎಸ್.ಕೆ.ಮಲ್ಲಮ್ಮ, ಸಹ ಶಿಬಿರಾಧಿಕಾರಿ ಎಚ್.ಹೂವಮ್ಮ, ಕಾಲೇಜು ಸಮಿತಿ ಸದಸ್ಯ ಬಿ.ಎಸ್.ಶಿವಕುಮಾರ್, ಉಪನ್ಯಾಸಕ ಎಚ್.ಎಸ್.ಗುರುಸ್ವಾಮಿ ಇತರರು ಇದ್ದರು. ವಿದ್ಯಾಶ್ರೀ  ನಿರೂಪಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT