ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಐಎ ವಶಕ್ಕೆ ಅಬು ಜುಂದಾಲ್

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಿವಿಧ ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುವ ಸಂದರ್ಭದಲ್ಲಿ ತನಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ ಎಂದು ಲಷ್ಕರ್-ಎ-ತೊಯ್ಬಾ ಸಂಘಟನೆಯ ಭಯೋತ್ಪಾದಕ ಅಬು ಜಿಂದಾಲ್ ಸೋಮವಾರ ನ್ಯಾಯಾಲಯದಲ್ಲಿ ದೂರಿದ್ದಾನೆ.

ಜುಂದಾಲ್‌ನನ್ನು ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶ ಎಚ್. ಎಸ್. ಶರ್ಮಾ ಅವರು ಆತನನ್ನು ಈ ತಿಂಗಳ 20ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೆ ಒಪ್ಪಿಸಿದರು. ಈ ಸಂದರ್ಭದಲ್ಲಿ ಜುಂದಾಲ್ ತನಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲಾಗಿದೆ ಎಂದು ದೂರಿದ್ದಾನೆ.

ಜುಂದಾಲ್‌ನ್ನು ವಿವರವಾದ  ವಿಚಾರಣೆಗೆ ಒಳಪಡಿಸಬೇಕಾಗಿರುವುದರಿಂದ 15 ದಿನಗಳವರೆಗೆ ತನ್ನ ವಶಕ್ಕೆ ಒಪ್ಪಿಸಬೇಕು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ಮನವಿ ಮಾಡಿತ್ತು. ಈ ಮನವಿಯನ್ನು  ನ್ಯಾಯಾಧೀಶರು ಪುರಸ್ಕರಿಸಿದರು.

ಜುಂದಾಲ್‌ನನ್ನು ಈಗಾಗಲೇ ವಿವಿಧ ತನಿಖಾ ಸಂಸ್ಥೆಗಳು ವಿಚಾರಣೆಗೆ ಒಳಪಡಿಸಿ ವಿವರಗಳನ್ನು ಪಡೆದಿರುವುದರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮತ್ತೆ ವಿಚಾರಣೆ ನಡೆಸುವ ಅಗತ್ಯವಿಲ್ಲ.

ಈಗಾಗಲೇ ದಾಖಲಿಸಿಕೊಂಡಿರುವ ಹೇಳಿಕೆಗಳನ್ನು ವಿವಿಧ ತನಿಖಾ ಸಂಸ್ಥೆಗಳಿಂದ ಪಡೆಯಬಹುದಾಗಿದೆ ಎಂದು ಜುಂದಾಲ್ ಪರ ವಕೀಲ ಅಕ್ರಮ್ ಖಾನ್ ಅವರ ವಾದವನ್ನು ನ್ಯಾಯಾಧೀಶರು ತಳ್ಳಿಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT