ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಕೆಸಿಸಿಐ:ಮಾರಾಟ ಮೇಳ

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸಣ್ಣ ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ (ಎಫ್‌ಕೆಸಿಸಿಐ) ಆಯೋಜಿಸಿರುವ ಎರಡು ದಿನಗಳ  ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಇಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ (ಕೆಎಸ್‌ಡಬ್ಲ್ಯುಡಿಸಿ) ಅಧ್ಯಕ್ಷೆ ಸರೋಜಿನಿ ಭಾರದ್ವಾಜ್  ಚಾಲನೆ ನೀಡಿದರು. 

ಈ  ಮೇಳ ಅಕ್ಟೋಬರ್ 14 ಮತ್ತು 15ರಂದು ನಡೆಯಲಿದ್ದು, ಸುಮಾರು 40ಕ್ಕೂ ಹೆಚ್ಚು ಮಹಿಳಾ ಉದ್ದಿಮೆದಾರರು ಮಾರಾಟ ಮಳಿಗೆಗಳನ್ನು ತೆರೆದಿದ್ದಾರೆ. 

`ಕಿರು ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದು ಮತ್ತು ಅವರಿಗೆ ಸೂಕ್ತ ಮಾರುಕಟ್ಟೆ ಒದಗಿಸುವುದು ಈ ಮೇಳದ ಪ್ರಮುಖ ಉದ್ದೇಶ.   ಎಫ್‌ಕೆಸಿಸಿಐ, ಕೆನರಾ ಬ್ಯಾಂಕ್ ಮತ್ತು ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮ  ಜಂಟಿಯಾಗಿ ಈ ಮೇಳ ಆಯೋಜಿಸುತ್ತಿದೆ.

ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲೂ ಪ್ರತಿ ತಿಂಗಳು ಇಂತಹ ವಸ್ತು ಪ್ರದರ್ಶನ ಮೇಳ ಮತ್ತು ಮಹಿಳಾ ಉದ್ದಿಮೆದಾರರಿಗೆ ತರಬೇತಿ ಶಿಬಿರ ಆಯೋಜಿಸುವ ಯೋಜನೆ ಇದೆ ಎಂದು `ಎಫ್‌ಕೆಸಿಸಿಐ~ ಅಧ್ಯಕ್ಷ ಜೆ.ಆರ್ ಬಂಗೇರಾ ತಿಳಿಸಿದರು. ಎಂದು `ಎಫ್‌ಕೆಸಿಸಿಐ~ ಅಧ್ಯಕ್ಷ ಜೆ.ಆರ್ ಬಂಗೇರಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT