ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಹಂತದ ಜನಗಣತಿ ಆರಂಭ

Last Updated 9 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜನಗಣತಿ -2011ರ ಎರಡನೇ ಹಂತದ ಪ್ರಕ್ರಿಯೆ ಬುಧವಾರ ಆರಂಭಗೊಂಡಿದೆ.

ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ರಾಷ್ಟ್ರಪತಿ ಭವನದಲ್ಲಿ ತಮ್ಮ ಕುರಿತ ಮಾಹಿತಿಯನ್ನು ಗಣತಿಗಾರರಿಗೆ ನೀಡುವ ಮೂಲಕ ಎರಡನೇ ಹಂತದ ಪ್ರಕ್ರಿಯೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ  ಗೃಹ ಸಚಿವ ಪಿ.ಚಿದಂಬರಂ, ಗೃಹ ಖಾತೆ ರಾಜ್ಯ ಸಚಿವ ಗುರುದಾಸ್ ಕಾಮತ್, ಜನಗಣತಿ ಆಯುಕ್ತ ಡಾ. ಸಿ.ಚಂದ್ರಮೌಳಿ ಮತ್ತು ದೆಹಲಿಯ ಜನಗಣತಿ ಕಾರ್ಯಾಚರಣೆಯ ನಿರ್ದೇಶಕ ವರ್ಷ ಜೋಶಿ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಪ್ರತಿಭಾ ಪಾಟೀಲ್, ‘ಜನಗಣತಿ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕನೂ ಭಾಗವಹಿಸುವುದು ನಮ್ಮ ರಾಷ್ಟ್ರೀಯ ಕರ್ತವ್ಯ ಎಂದು ಭಾವಿಸಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT