ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಕ್ಕೂ ಉತ್ತರಿಸುವೆ: ಲೋಕಾಯುಕ್ತ

Last Updated 18 ಸೆಪ್ಟೆಂಬರ್ 2011, 20:25 IST
ಅಕ್ಷರ ಗಾತ್ರ

ಬೆಂಗಳೂರು: ಗೃಹ ನಿರ್ಮಾಣ ಸಹಕಾರ ಸಂಘಗಳ ಉಪನಿಯಮ (ಬೈಲಾ) ಉಲ್ಲಂಘಿಸಿ ನಿವೇಶನಗಳನ್ನು ಪಡೆದಿರುವ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯೆ ನೀಡಲು ತೀರ್ಮಾನಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್, ರಾಜೀನಾಮೆ ನೀಡುವ ಸಾಧ್ಯತೆ ಕುರಿತ ವದಂತಿಯನ್ನು ತಳ್ಳಿ ಹಾಕಿದ್ದಾರೆ.

ಈ ಕುರಿತು `ಪ್ರಜಾವಾಣಿ~ ಜೊತೆ ಮಾತನಾಡಿದ ಅವರು, `ನಾನು ಇಷ್ಟು ದಿನಗಳ ಕಾಲ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರವಾಸದಲ್ಲಿದ್ದೆ. ಈ ಕಾರಣದಿಂದಾಗಿ ವಿವಾದದ ಕುರಿತು ಪ್ರತಿಕ್ರಿಯಿಸಲು ಸಾಧ್ಯವಾಗಿರಲಿಲ್ಲ. ವಿವಾದದ ಬಗ್ಗೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಮಗ್ರ ಪ್ರತಿಕ್ರಿಯೆ ನೀಡುತ್ತೇನೆ~ ಎಂದರು.

ಪಾಟೀಲ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವದಂತಿ ಭಾನುವಾರ ದಟ್ಟವಾಗಿ ಹಬ್ಬಿತ್ತು.

ಈ ಬಗ್ಗೆ ಅವರನ್ನು ಪ್ರಶ್ನಿಸಿದಾಗ, `ರಾಜೀನಾಮೆ ನೀಡುವಂತಹ ನಿರ್ಧಾರದ ಬಗ್ಗೆ ನಾನು ಯೋಚಿಸಿಯೇ ಇಲ್ಲ. ಈ ಬಗ್ಗೆ ಮಾಧ್ಯಮಗಳು ಪ್ರವಾಸದಲ್ಲಿದ್ದಾಗಲೇ ಪ್ರಶ್ನಿಸಿದ್ದವು. ಎಲ್ಲರಿಗೂ ಸೋಮವಾರ ಉತ್ತರಿಸುವುದಾಗಿ ತಿಳಿಸಿದ್ದೇನೆ~ ಎಂದು ಪ್ರತಿಕ್ರಿಯಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT