ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲರೂ ಒಟ್ಟಾಗಿ ಬಾಳುವುದೇ ನಮ್ಮ ದೇಶದ ವೈಶಿಷ್ಟ್ಯ

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಎಲ್ಲ ರೀತಿಯ ದೇಶ ವಿಭಜಕ ಶಕ್ತಿಗಳನ್ನು ಕೊನೆಗೊಳಿಸಬೇಕು. ಎಲ್ಲ ಧರ್ಮೀಯರು ಒಟ್ಟಾಗಿ ಬಾಳಬೇಕು. ಆಗಲೇ ವಿಶ್ವದ ಮುಂದೆ ನಮ್ಮದು ವಿಶಿಷ್ಟ ರಾಷ್ಟ್ರ ಎಂಬುದು ತಿಳಿಸಿದಂತಾಗುತ್ತದೆ~ ಎಂದು ರಾಜ್ಯಪಾಲ ಎಚ್. ಆರ್.ಭಾರದ್ವಾಜ್ ಅಭಿಪ್ರಾಯಪಟ್ಟರು.

`ಕಾರಿಟಸ್ ಇಂಡಿಯಾ~ ಸಾಮಾಜಿಕ ಸೇವಾ ಸಂಸ್ಥೆಗೆ 50 ವರ್ಷ ತುಂಬಿದ ಪ್ರಯುಕ್ತ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಸುವರ್ಣ ಮಹೋತ್ಸವದ ಸಮಾರೋಪದಲ್ಲಿ ಮಾತನಾಡಿದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ.ಮಂಜುಳಾ ಮಾತನಾಡಿ, ` ಕಾನೂನು ತಿಳಿವಳಿಕೆ ನೀಡಲು ಕಾರಿಟಸ್ ಸಂಸ್ಥೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು. ಬೆಂಗಳೂರು ಆರ್ಚ್ ಬಿಷಪ್ ಡಾ.ಬರ್ನಾರ್ಡ್ ಮೋರಸ್ ಮಾತನಾಡಿ, ಕೇಂದ್ರ ಯೋಜನಾ ಆಯೋಗವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಬಿಪಿಎಲ್ ಪಡಿತರ ಚೀಟಿಗಳ ವಿತರಣೆಯ ಮಾನದಂಡವನ್ನು ವಿವರಿಸಲಾಗಿದೆ.

ನಗರ ಪ್ರದೇಶದಲ್ಲಿ 32 ರೂಪಾಯಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ 25 ತಲಾದಾಯ ಇದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಬೇಕಿಲ್ಲ ಎಂದು ವರದಿ ನೀಡಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT