ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲೆಡೆ ಸಂಭ್ರಮದ ಶಿಕ್ಷಕರ ದಿನ ಆಚರಣೆ

ಪ್ರಜಾವಾಣಿ ವಾರ್ತೆ
Last Updated 6 ಸೆಪ್ಟೆಂಬರ್ 2013, 6:30 IST
ಅಕ್ಷರ ಗಾತ್ರ

ಹಾಸನ: `ಶಿಕ್ಷಕ ವೃತ್ತಿ ಗೌರವಯುತವಾದದ್ದು, ಸಮಾಜದ ಅಭಿವೃದ್ಧಿ ಮತ್ತು ಶಕ್ತಿಶಾಲಿ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವೇ ಮುಖ್ಯ' ಎಂದು ಶಾಸಕ ಎಚ್.ಎಸ್. ಪ್ರಕಾಶ್ ನುಡಿದರು.

ನಗರದ ಹಾಸನಂಬ ಕಲಾಭವನದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

`ಶಿಕ್ಷಕರು ತಮ್ಮ ಹೊಣೆಗಾರಿಕೆ ಅರಿತು ಅದಕ್ಕೆ ತಕ್ಕಂತೆ ಕರ್ತವ್ಯ ನಿರ್ವಹಿಸಬೇಕು. ದೇಶದಲ್ಲಿ ನಿರಂತರ ಬದಲಾವಣೆಗಳು ಆಗುತ್ತಲೇ ಇವೆ. ಇಂಥ ಬದಲಾವಣೆಗಳು ಸಕಾರಾತ್ಮಕವಾಗಿರಬೇಕು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿರಬೇಕು. ಶಿಕ್ಷಣ ಕ್ಷೇತ್ರ ಬಂಡ ವಾಳಶಾಹಿಗಳ ಕೈಯಲ್ಲಿ ಸಿಲುಕುತ್ತಿದೆ. ಇದೇ ಪರಿಸ್ಥಿತಿ ಮುಂದು ವರಿದರೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮೀಸ ಲಾತಿ ನೀಡಬೇಕಾದ ಪರಿಸ್ಥಿತಿ ಬಂದರೂ ಬರಬಹುದು' ಎಂದರು.

ಉಪನ್ಯಾಸಕ ಮೋಹನ್ ಕುಮಾರ್ ಪ್ರಧಾನ ಭಾಷಣ ಮಾಡಿದರು. ಜಿ.ಪಂ.ಅಧ್ಯಕ್ಷೆ ಅಂಬಿಕಾ ರಾಮಕೃಷ್ಣ, ಉಪಾಧ್ಯಕ್ಷ ಬಿಳಿ ಚೌಡಯ್ಯ ಮತ್ತಿತರರು ಮಾತನಾಡಿದರು.

ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್, ಪ್ರೊಬೇಷನರಿ ಜಿಲ್ಲಾಧಿಕಾರಿ ರಾಮಚಂದ್ರ, ಉಪವಿಭಾಗಾಧಿಕಾರಿ ಜಗದೀಶ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು. 

ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಣಗೌಡ,  ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್.ಬಸವರಾಜು ಸ್ವಾಗತಿಸಿದರು.

ಶಿಕ್ಷಕರದು ದೊಡ್ಡ ಹುದ್ದೆ: ಶಾಸಕ
ಬೇಲೂರು: ದೇಶ ಅಭಿವೃದ್ಧಿ ಪಥದಲ್ಲಿ ನಡೆಯಬೇಕಾದರೆ ಶಿಕ್ಷಕರ ಪಾತ್ರ ಮುಖ್ಯ. ಈ ದಿಸೆಯಲ್ಲಿ ಶಿಕ್ಷಕರು ತಮ್ಮ ಹುದ್ದೆಯನ್ನು ಸಣ್ಣ ಪ್ರಮಾಣ ಎಂದು ಭಾವಿಸಬಾರದು ಎಂದು ಶಾಸಕ ವೈ.ಎನ್.ರುದ್ರೇಶ್‌ಗೌಡ ತಿಳಿಸಿದರು.

ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂದಿರದಲ್ಲಿ ಬೇಲೂರು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 125 ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.

ಅನಾದಿ ಕಾಲದಿಂದ ನಾವುಗಳು ಶಿಕ್ಷಕರನ್ನು ಗುರುಗಳ ಸ್ಥಾನದಲ್ಲಿ ನೋಡುತ್ತಾ ಬಂದಿದ್ದೆವೆ. ಮುಗ್ಧ ಮುಗುವಿನ ಮನಸ್ಸು ಅರ್ಥ ಮಾಡಿಕೊಂಡು ಆತನಿಗೆ ಶಿಕ್ಷಣ ನೀಡುವ ಹೊಣೆಗಾರಿಕೆ ಶಿಕ್ಷಕರಲಿ ್ಲಇದೆ. ಭಾರತದ ಶಿಕ್ಷಣಕ್ಕೆ ಮಾರು ಹೋದ ವಿದೇಶದವರು ನಮ್ಮಲಿಗ್ಲೆ ಬಂದು ಉನ್ನತ ವ್ಯಾಸಂಗ ಮಾಡುತ್ತಿದ್ದು, ಈ ಬೆಳವಣಿಗೆ ಶಿಕ್ಷಕರ ಕುಲಕ್ಕೆ ಆದರ್ಶ ಪ್ರಾಯವಾಗಿದೆ ಎಂದರು.

ಸರ್ಕಾರ ಇತೀಚಿನ ದಿನ ಮಾನದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅಧ್ಯತೆ ನೀಡಲಾಗಿದ್ದು,16 ಸಾವಿರ ಕೋಟಿ ರೂಗಳನ್ನು ವೆಚ್ಚ ಮಾಡಲಿದೆ, ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.

ಮುಖ್ಯ ಭಾಷಣಕಾರ ಸಾಹಿತಿ ಚಣ್ನಹಳ್ಳಿ ಮಹೇಶ್ ಮಾತನಾಡಿ ಶಿಕ್ಷಕರ ದಿನಾಚರಣೆ ಯಾಂತ್ರಿಕ ದಿನವಾಗಿ ಅಚರಣೆ ಮಾಡಬಾರದು. ಉತ್ತಮ ಶಿಕ್ಷಕನ ಅಯ್ಕೆ ಮಾಡುವ ಸಂದರ್ಭದಲಿ ್ಲರಾಜಕೀಯದ ಗಾಳಿ ಬಿಸುತ್ತಿದೆ, ಶಿಪಾರಸ್ಸು ಪಡೆದು ಉತ್ತಮ ಶಿಕ್ಷಕ ಪ್ರಶಸ್ತಿ ಪಡೆಯುವದು ದೇಶಕ್ಕೆ ಮಾರಕ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಮಿತ್ರರುದ್ರಯ್ಯ, ಜಿಲಾ ್ಲಪಂಚಾಯಿತಿ ಸದಸ್ಯರಾದ ಹೇಮಾವತಿ ಮಂಜುನಾಥ್, ಬಿ.ಡಿ.ಚಂದ್ರೇಗೌಡ, ಅಮಿತ್‌ಕುಮಾರ್‌ಶೆಟ್ಟಿ, ಜಿ.ಟಿ.ಇಂದಿರಾಧರ್ಮಪ್ಪ, ತಾಲೂಕ್ಲು ಕ್ಷೇತ್ರಶಿಕ್ಷಣಾಧಿಕಾರಿ ವೈ.ಬಿ.ಸುಂದ್ರೇಶ್, ತಾಲೂಕ್ಲು ಪಂಚಾಯಿತಿ ಉಪಾಧ್ಯಕ್ಷೆ ಕಮಲಮ್ಮ, ಸದಸ್ಯೆ ಪವಿತ್ರ, ಕೆ.ಪಿ,ನಾರಾಯಣ್, ಹೇಮಂತ್‌ಕುಮಾರ್, ರಂಗ ಸ್ವಾಮಿ, ಮುಳ್ಳಯ್ಯ, ಈರೇಶ್, ಗೌಡೇಗೌಡ, ಜಗದೀಶ್, ಭದ್ರೇ ಗೌಡ, ತಾ. ಮಾಜಿ ಅಧ್ಯಕ್ಷೆ ಕಮಲಚನ್ನಪ್ಪ, ಅನಂದ್ ಹಾಜರಿದ್ದರು.

`ರಾಧಾಕೃಷ್ಣನ್ ಆದರ್ಶ ಅಳವಡಿಸಿಕೊಳ್ಳಿ'
ಜಾವಗಲ್: ಡಾ.ಎಸ್.ರಾಧಾಕೃಷ್ಣನ್ ಶಿಕ್ಷಕ, ಉಪನ್ಯಾಸಕ, ಪ್ರಾಧ್ಯಾಪಕ, ತತ್ವಜ್ಞಾನಿ, ದಾರ್ಶನಿಕರಾಗಿ ಉಪ ರಾಷ್ಟ್ರಪತಿ ಹಾಗು ರಾಷ್ಟ್ರಪತಿಯಾಗಿ ದೇಶದ ಅಭ್ಯುದಯಕ್ಕಾಗಿ ಶ್ರಮಿಸಿದ ಮಹಾನ ಚೇತನವಾಗಿದ್ದರು ವಿದ್ಯಾರ್ಥಿಗಳು ಡಾ.ಎಸ್.ರಾಧಾಕೃಷ್ಣನ್ ಅವರ ಆದರ್ಶಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳ ಬೇಕು ಎಂದು  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಸಂತರಾಜ್ ಅರಸ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಪನ್ಯಾಸಕ ಮಂಜುನಾಥ್ ಮಾತನಾಡಿದರು. ಹಿರಿಯ ಉಪನ್ಯಾಸಕರಾದ ಎನ್.ಉದಯಕುಮಾರ್, ನಾಗರಾಜು, ಶಿವಲಿಂಗಯ್ಯ, ಸೇರಿದಂತೆ ಉಪನ್ಯಾಸಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಉಪನ್ಯಾಸಕರುಗಳಿಗೆ ನೆನಪಿನ ಕಾಣಿಕೆ ನೀಡಿದರು.

ಮಾಡೆಲ್ ಶಾಲೆಯಲ್ಲಿ ಶಿಕ್ಷಕದಿನಾಚರಣೆಯನ್ನು ಆಚರಿಸಿ ಶಿಕ್ಷಕರುಗಳಿಗೆ ವಿವಿಧ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಸಂಸ್ಥೆಯ ಕಾರ್ಯದರ್ಶಿ ಎಸ್.ವಿನಾಯಕ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.

`ಮಕ್ಕಳಿಗೆ ಬದುಕಿನ ಮೌಲ್ಯ ಹೇಳಿಕೊಡಿ'
ಸಕಲೇಶಪುರ: ಒಂದು ಆರೋಗ್ಯಕರ ಸಮಾಜ ನಿರ್ಮಾಣದ ಹಿಂದೆ ಶಿಕ್ಷಕರ ಪಾತ್ರ ಪ್ರಮುಖವಾದುದು ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ‌್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ರಾಷ್ಟ್ರದ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿರುವುದು ಶ್ಲಾಘನೀಯ ಎಂದ ಅವರು, ಪಠ್ಯ ಶಿಕ್ಷಕಣದ ಜೊತೆಗೆ ಬದುಕಿನ ಮೌಲ್ಯಗಳಿಗೂ ಸಹ ಹೆಚ್ಚು ಒತ್ತು ಕೊಡುವ ಅಗತ್ಯವಿದೆ ಎಂದರು.

ಹೊಳೆನರಸಿಪುರದ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ.ಬಿ.ಇರ್ಷಾದ್ ಮಾತನಾಡಿದರು. ಕಾರ್ಯಕ್ರಮದಲ್ಲಿ  ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳ ದೀಪ ಬೆಳಗಿಸಿ ಮಾತನಾಡಿದರು.  ಉಪ ವಿಭಾಗಾಧಿಕಾರಿ ಶ್ರೀವಿಧ್ಯಾ ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು.

ಸನ್ಮಾನ: ಲಯನ್ಸ್ ಹಾಗೂ ಲಯನೆಸ್ ಸಂಸ್ಥೆ ವತಿಯಿಂದ, ನಿವೃತ್ತ ಶಿಕ್ಷಕರಾದ ಮಂಜುಳ, ಫೈಜುನ್ನಿಸಾ ಬೇಗಂ, ಗ್ರೇಸಿ ಕಾರ್ಡೋಜ, ಬಿಲ್ಕಿಸ್ ಭಾನು, ಪುಟ್ಟರಾಜು, ಎಚ್.ಎಸ್.ಸುಬ್ರಹ್ಮಣ್ಯ, ಕೆ.ಮುತ್ತಯ್ಯ, ಹುಚ್ಚೆಗೌಡ, ಚಂದ್ರಶೇಖರ್, ಮಲ್ಲೇಗೌಡ, ನಂಜಪ್ಪರನ್ನು ಸನ್ಮಾನಿಸಲಾಯಿತು. ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಗೀತಗಾಯನ, ಕ್ರೀಡೆ ಹಾಗೂ ರಸಪ್ರಶ್ನೆಯಲ್ಲಿ ವಿಜೇತರಾ ದವರಿಗೆ ಬಹುಮಾನ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಸುಲೋಚನ ರಾಮಕೃಷ್ಣ, ಮಂಜಮ್ಮ ತಿಪ್ಪೆಸ್ವಾಮಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ವೇದಾವತಿ, ಇಓ ಸಿದ್ಧರಾಜು, ತಹಸಿಲ್ದಾರ್ ಬಾಬು ದೇವಾಡಿಗ, ಕ್ಷೇತ್ರ ಶಿಕ್ಷಣ ಅಧಿಕಾರಿ ಪ್ರಕಾಶ್, ಲಯನ್ಸ್ ಸಂಸ್ಥೆ ಅಧ್ಯಕ್ಷ ನರೇಶ್, ಲಯನೆಸ್ ಅಧ್ಯಕ್ಷೆ ಮೇಘನರೇಶ್ ಮುಂತಾದವರು ಇದ್ದರು.

ಭಾಗೀರಥಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ
ಸಕಲೇಶಪುರ: ತಾಲ್ಲೂಕಿನ ವಣಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಿ.ಆರ್.ಭಾಗೀರಥಿ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಲಾಗಿದೆ.

ಗುರುವಾರ ಹಾಸನದ ಹಾಸನಾಂಭ ಕಲಾ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

ಇವರು ಪಶ್ಚಿಮಘಟ್ಟದ ಅಂಚಿನ ಗ್ರಾಮಗಳ ಶಾಲೆಗಳಲ್ಲಿ 30 ವರ್ಷಗಳ ಸೇವೆ ಸಲ್ಲಿಸಿರುವುದನ್ನು ಸ್ಮರಿಸಬಹುದು.

`ವಿದ್ಯಾರ್ಥಿಗಳಿಗೆ ಉತ್ತಮ ಗುಣ ಕಲಿಸಿ'
ಆಲೂರು: ಶಿಕ್ಷಕ ಉತ್ತಮ ಸಮಾಜದ ನಿರ್ಮಾಪಕ. ಮೌಲಿಕ ಶಿಕ್ಷಣ ನೀಡಿ ಮಕ್ಕಳನ್ನು ಆದರ್ಶ ನಾಗರೀಕರನ್ನಾಗಿಸಿ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ನುಡಿದರು.

ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲ್ಲೂಕು ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಆಲೂರು ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಲೂರು ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರೋ.ಪಿ.ರತ್ನಾವತಿ ಮಾತನಾಡಿದರು.

ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್.ಚಂದ್ರಶೇಖರ್, ತಾಲ್ಲೂಕು ಜೆ.ಡಿ.ಎಸ್.ಅಧ್ಯಕ್ಷ ಕೆ.ಎಸ್.ಮಂಜೇಗೌಡ, ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ ಎಚ್.ಬಿ.ಧರ್ಮರಾಜ್, ಸಮಯೋಚಿತವಾಗಿ ಮಾತಾಡಿದರು.

ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಜಿ.ಆರ್.ರಂಗನಾಥ್, ತಾಲ್ಲೂಕು ಬಿ.ಜೆ.ಪಿ.ಅಧ್ಯಕ್ಷ ಕೆ.ಆರ್.ಕಾಂತರಾಜು, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿ.ಶಿವರಾಮೇಗೌಡ, ಶಿಕ್ಷಣ ಕ್ಷೇತ್ರದ ಅಧ್ಯಕ್ಷರುಗಳು ಪದಾಧಿಕಾ ರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್‌ರವರು ರಚಿಸಿದ ಕೃತಿಯನ್ನು ಬಿಡುಗಡೆ ಮಾಡಲಾಯ್ತು. ನಿವೃತ್ತ ಶಿಕ್ಷಕರನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಉತ್ತಮ ಶಿಕ್ಷಕ
ಹೊಳೆನರಸೀಪುರ ತಾಲ್ಲೂಕಿನ ಜಾಕನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಚ್. ಚಂದ್ರಶೇಖರ್ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.

ಕೇಕ್ ಕತ್ತರಿಸಿ ದಿನ ಆಚರಣೆ
ಅರಕಲಗೂಡು: ಇಲ್ಲಿನ ಹಾಸನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ವಿಶಿಷ್ಟ ರೀತಿಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸುವ ಮೂಲಕ ಗುರುವಂದನೆ ಸಲ್ಲಿಸಿದರು.

ವಿದ್ಯಾರ್ಥಿಗಳು ಉಪನ್ಯಾಸಕರಿಂದ ಕೇಕ್ ಕತ್ತರಿಸಿದ್ದಲ್ಲದೇ ಅವರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು ವಿಜೇತರಿಗೆ ಬಹುಮಾನಗಳನ್ನು ನೀಡಿದರು. ಕಾಲೇಜಿನ ಕಾರ್ಯದರ್ಶಿ ಗಂಗಾಧರ್, ಪ್ರಚಾರ್ಯ ನವೀನ್ ಉಪಸ್ಥಿತರಿದ್ದರು.

ಮಕ್ಕಳಿಗೆ ಉತ್ತಮ ಗುಣ ಕಲಿಸಿ: ರೇವಣ್ಣ
ಹೊಳೆನರಸೀಪುರ: ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಜವಾಬ್ದಾರಿ ಶಿಕ್ಷಕರದು. ಎಲ್ಲಾ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ ಶಾಸಕ ಎಚ್.ಡಿ. ರೇವಣ್ಣ ನುಡಿದರು.

ಗುರುವಾರ ಇಲ್ಲಿನ ಶಿಕ್ಷಕರ ಭವನದಲ್ಲಿ ಏರ್ಪಡಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 125 ನೇ ಜನ್ಮದಿನಾಚರಣೆ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕ ಕುಟುಂಬಕ್ಕೆ ವೈದ್ಯಕೀಯ ಭತ್ಯ, ಕಡಿಮೆ ದರದಲ್ಲಿ ನಿವೇಶನ ನೀಡಬೇಕು. ವೇತನವನ್ನು ಶೇ 30 ರಷ್ಟು ಹೆಚ್ಚಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಗೊರೂರಿನ ಎ.ಎನ್.ವಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಜಿ.ಎನ್. ಅನುಸೂಯ ಮಾತನಾಡಿದರು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಯೋಗೇಶ್ ಸ್ವಾಗತಿಸಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪುಪ್ಪಾ, ಉಪಾಧ್ಯಕ್ಷ ನಂಜುಂಡಪ್ಪ, ಮಾಜಿ ಅಧ್ಯಕ್ಷ ಅನಂತ್‌ಕುಮಾರ್, ಸದಸ್ಯ ಲೋಕೇಶ್, ಜಿಲ್ಲಾ ಪಂಚಾಯ್ತಿ ಸದಸ್ಯೆ ಗೌರಮ್ಮ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಆದರ್ಶ ಶಾಲೆಯ ಪ್ರಾಂಶುಪಾಲ ಲೋಕೇಶ್, ಬಿಸಿ ಊಟ ಸಂಯೋಜನಾಧಿಕಾರಿ ಕುಮಾರ್, ಟಿ. ಮಲ್ಲೇಶ್, ಪದ್ಮಮ್ಮ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕುಮಾರಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT