ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಪಿಜಿ ಗ್ರಾಹಕ ಸಂಖ್ಯೆ ನೀಡಲು ಆಗ್ರಹ

Last Updated 22 ಜನವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಪಿಎಲ್ ಪಡಿತರ ಚೀಟಿ ಹೊಂದಿರದ ಅಡುಗೆ ಅನಿಲ ಸಿಲಿಂಡರ್ ಗ್ರಾಹಕರು ತಮ್ಮ ಮನೆಯ ವಿದ್ಯುತ್ ಬಿಲ್‌ನ ಆರ್‌ಆರ್ ಸಂಖ್ಯೆ ಮತ್ತು ಎಲ್‌ಪಿಜಿ ಗ್ರಾಹಕ ಸಂಖ್ಯೆಯನ್ನು ತಮಗೆ ಅಡುಗೆ ಅನಿಲ ಪೂರೈಸುವ ಏಜೆನ್ಸಿಗಳಿಗೆ ಇದೇ 29ರ ಒಳಗೆ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಬಿ.ಎ. ಹರೀಶ್ ಗೌಡ ತಿಳಿಸಿದ್ದಾರೆ.

ಗ್ರಾಹಕರು ತಮ್ಮ ಅಡುಗೆ ಅನಿಲ ಸಂಪರ್ಕ ಉಳಿಸಿಕೊಳ್ಳಬೇಕಾದಲ್ಲಿ ಪಡಿತರ ಚೀಟಿಯ ಛಾಯಾಪ್ರತಿಯ ಮೇಲೆ ವಿದ್ಯುತ್ ಬಿಲ್‌ನ ಆರ್‌ಆರ್ ಸಂಖ್ಯೆ ಮತ್ತು ಎಲ್‌ಪಿಜಿ ಗ್ರಾಹಕರ ಸಂಖ್ಯೆಯನ್ನು ನಮೂದಿಸಿ ತಮಗೆ ಅಡುಗೆ ಅನಿಲ ಪೂರೈಸುವ ಏಜೆನ್ಸಿಗಳಿಗೆ ನೀಡಬೇಕು ಎಂದು ಇಲಾಖೆ ಶುಕ್ರವಾರ ತಿಳಿಸಿತ್ತು.

ಎಪಿಎಲ್ ಪಡಿತರ ಚೀಟಿ ಇಲ್ಲದ ಅಡುಗೆ ಅನಿಲ ಸಿಲಿಂಡರ್ ಗ್ರಾಹಕರು ಮಾಡಬೇಕಾದ ಕ್ರಮ ಏನು ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಿರುವ ಇಲಾಖೆ ‘ಮನೆಯ ವಿದ್ಯುತ್ ಬಿಲ್‌ನ ಆರ್‌ಆರ್ ಸಂಖ್ಯೆ ಮತ್ತು ಎಲ್‌ಪಿಜಿ ಗ್ರಾಹಕ ಸಂಖ್ಯೆಯನ್ನು ತಮಗೆ ಅಡುಗೆ ಅನಿಲ ಪೂರೈಸುವ ಏಜೆನ್ಸಿಗಳಿಗೆ’ ನೀಡಬೇಕು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT