ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಪಿಜಿ ದರ ಏರಿಕೆಗೆ ವಿರೋಧ

Last Updated 6 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ):  ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳವನ್ನು ವಿರೋಧಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, `ಇದೊಂದು ಅತ್ಯಂತ ಕೆಟ್ಟ ಹಾಗೂ ದುರದೃಷ್ಟಕರ~ ಬೆಳವಣಿಗೆ ಎಂದು ಲೇವಡಿ ಮಾಡಿದ್ದಾರೆ.

`ಯುಪಿಎ ಎರಡನೇ ಅವಧಿಯಲ್ಲಿ ಎಷ್ಟು ಬಾರಿ ಬೆಲೆ ಏರಿಕೆಯಾಗಿದೆ ಎನ್ನುವುದು ನಿಮಗೆ ಗೊತ್ತಾ?~ ಎಂದು ದೀದಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

`ಮತ್ತೆ ಕೇಂದ್ರ ಸರ್ಕಾರ ಎಲ್‌ಪಿಜಿ ಪ್ರತಿ ಸಿಲಿಂಡರ್ ದರವನ್ನು ರೂ 11.42 ಹೆಚ್ಚಿಸಿದ್ದು, ಇದು ತುಂಬಾ ಕೆಟ್ಟ ನಿರ್ಧಾರ~ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಪಿಡಿಪಿ ಪ್ರತಿಭಟನೆ (ಶ್ರೀನಗರ ವರದಿ): ಎಲ್‌ಪಿಜಿ ಬೆಲೆ ಏರಿಕೆ ವಿರೋಧಿಸಿ ಶ್ರೀನಗರದಲ್ಲಿ ವಿರೋಧ ಪಕ್ಷ ಪಿಡಿಪಿ ಪ್ರತಿಭಟನೆ ನಡೆಸಿತು.

ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು, `ರಾಜ್ಯದಲ್ಲಿ ಸಿಲಿಂಡರ್ ಮಿತಿಯನ್ನು ಹೆಚ್ಚಿಸಬೇಕೆಂದು~ ಆಗ್ರಹಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT