ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಉತ್ಸಾಹದ ಆರಂಭ

Last Updated 1 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಆರಂಭಗೊಂಡಿದ್ದು, ನಗರ ವ್ಯಾಪ್ತಿಯಲ್ಲಿ 1,16,114 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಪರೀಕ್ಷಾ ಕೇಂದ್ರಗಳ ಮುಂಭಾಗದಲ್ಲಿ ಉತ್ಸವದ ವಾತಾವರಣ ಇತ್ತು. ಕೊನೆಯ ಕ್ಷಣದ ತಯಾರಿ ಜೋರಿತ್ತು. ಪರೀಕ್ಷಾ ಕ್ಷಣ ಸಮೀಪಿಸುತ್ತಿದ್ದಂತೆ ಅನುಮಾನಾಸ್ಪದ ವ್ಯಕ್ತಿಗಳನ್ನು ಪರೀಕ್ಷಾ ಕೇಂದ್ರಗಳಿಂದ ದೂರ ಕಳುಹಿಸಲಾಯಿತು.

ಮೊದಲ ದಿನ ಪ್ರಥಮ ಭಾಷೆಯ ಪರೀಕ್ಷೆ ನಡೆಯಿತು. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 193 ಪರೀಕ್ಷಾ ಕೇಂದ್ರಗಳಲ್ಲಿ 46,740 ಹೊಸ ವಿದ್ಯಾರ್ಥಿಗಳು ಹಾಗೂ 5,374 ಪುನಾರವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಉತ್ತರ ಜಿಲ್ಲೆಯಲ್ಲಿ 217 ಪರೀಕ್ಷಾ ಕೇಂದ್ರಗಳಲ್ಲಿ 64,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ರಾಜಧಾನಿಯಲ್ಲಿ ಮೊದಲ ದಿನ ಪರೀಕ್ಷಾ ನಕಲು ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದು ಎರಡೂ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT