ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ: ಕಾರ್ಯಾಗಾರ

Last Updated 15 ಸೆಪ್ಟೆಂಬರ್ 2011, 5:45 IST
ಅಕ್ಷರ ಗಾತ್ರ

ಗದಗ: ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಹಾಗೂ ಪಾಲಕರ ಪಾತ್ರ ಮಹತ್ವದ್ದಾಗಿದೆ ಎಂದು ಡಯಟ್ ಪ್ರಾಚಾರ್ಯ ಅಬ್ದುಲ್ ಅಜೀಮ್ ಹೇಳಿದರು. ನಗರದ ಲೋಯಲಾ ಪ್ರೌಢಶಾಲೆ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಶಹರ ಪ್ರೌಢಶಾಲೆ ಶಿಕ್ಷಕ, ಶಿಕ್ಷಕಿಯರಿಗಾಗಿ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ  ಫಲಿತಾಂಶ ಸುಧಾರಣೆ ಹಾಗೂ ಇಂಗ್ಲಿಷ್, ವಿಜ್ಞಾನ ಕೌಶಲ್ಯ ಅಭಿವೃದ್ಧಿ ವಿಷಯದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಎಷ್ಟೇ ಕಾನೂನು ರಚಿಸಿ ಅಧಿಕಾರಿ ಗಳಿಂದ ಕಟ್ಟುನಿಟ್ಟಿನ ಕ್ರಮ ಜರುಗಿಸಿ ದರೂ ಅಂತಿಮವಾಗಿ ಪರೀಕ್ಷಾ ಫಲಿ ತಾಂಶವನ್ನು ಉತ್ತಮಪಡಿಸುವ ಗುರುತ ರವಾದ ಜವಾಬ್ದಾರಿ ಶಿಕ್ಷರದ್ದೆೀ ಆಗಿದೆ. ಶಿಕ್ಷಕ ವೃತ್ತಿಯಲ್ಲಿರುವರು ಕರ್ತವ್ಯ ಪ್ರಜ್ಞೆಯೊಂದಿಗೆ ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಡಾ. ಆರ್.ಟಿ. ಕುಲಕರ್ಣಿ ಮಾತನಾಡಿ, ಶಿಕ್ಷಕರಿಗೆ ಇಂತಹ ಕಾರ್ಯಾಗಾರವನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಫಲಿತಾಂಶ ಸುಧಾರಣೆ ಮತ್ತು ಶಿಕ್ಷಣದ ಗುಣ ಮಟ್ಟವನ್ನು ಹೆಚ್ಚಿಸಲು ಸಹಕಾರಿ ಯಾಗುತ್ತದೆ. ಶಿಕ್ಷಕರಿಗೆ ಮತ್ತು ಮಕ್ಕ ಳಿಗೆ ಕಂಪ್ಯೂಟರ್ ಜ್ಞಾನ ಕಲಿಕೆ ಅಗತ್ಯ ಎಂದರು.

ಎಸ್.ಎಂ. ಕೊಟಗಿ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದು ಸೇರಿದಂತೆ ಬಿಸಿಯೂಟ, ಗಣತಿ, ತರಬೇತಿ ಹೀಗೆ ಇತರ ಕಾರ್ಯಗಳನ್ನು ನಿರ್ವಹಿಸಬೇಕಾಗಿದೆ. ಶಿಕ್ಷಕರು ತಮಗೆ ವಹಿಸಿದ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಶಿಕ್ಷಣದ ಗುಣಮಟ್ಟ ಹಾಗೂ ಫಲಿತಾಂಶ ಉತ್ತಮಪಡಿಸಲು ಸಾಕಷ್ಟು ಪ್ರಯತ್ನಿ ಸುತ್ತಿದ್ದಾರೆ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ ನಾಯಕ ಅಧ್ಯಕ್ಷತೆ ವಹಿಸಿದ್ದರು. ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢಶಾಲೆ ಮುಖ್ಯಾಧ್ಯಾಪಕಿ ಸಿಸ್ಟರ್ ನೀನಾ, ಮಂಗಲಾ ತಾಪಸ್ಕರ, ಮ್ಯಾಗೇರಿ, ಫರೂಕಿ ಮತ್ತಿತರರು ಹಾಜರಿದ್ದರು. ಎಸ್.ಎಸ್.ಗೌಡರ ಪ್ರಾರ್ಥಿ ಸಿದರು. ರೋಟರಿ ಕಬ್ಲ್ ಅಧ್ಯಕ್ಷೆ ಡಾ. ಜ್ಯೋತಿಶ್ರೀ ಕಮತ ಸ್ವಾಗತಿಸಿದರು. ಶಿವಾನಂದ ಗಿಡ್ನಂದಿ ನಿರೂಪಿಸಿದರು. ಸೆಲ್ವ ವಂದಿಸಿದರು.

ನಂತರ ಕಾರ್ಯಾಗಾರದಲ್ಲಿ ಡಾ. ಜ್ಯೋತಿಶ್ರೀ ಕಮತ್, ವಿ.ಬಿ. ದೇಶ ಪಾಂಡೆ, ವೈ.ಡಿ. ಸುರಕೋಡ, ಪಿ.ಕೆ. ಕರಡಿ, ಎಂ.ಎಸ್. ಚಿನ್ನೂರ ಸಂಪನ್ಮೂಲ ವ್ಯಕ್ತಿಗಳಾಗಿ ವಿಷಯ ಮಂಡಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT