ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಬಿಐ: ಶೇ 14ರಷ್ಟು ನಿವ್ವಳ ಲಾಭ

Last Updated 23 ಜನವರಿ 2011, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ):ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕ ಅವಧಿಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ)  ಶೇಕಡ 14.07ರಷ್ಟು ನಿವ್ವಳ ಲಾಭ ದಾಖಲಿಸಿದೆ ಎಂದು ಪ್ರಕಟಣೆ ತಿಳಿಸಿದೆ.

‘ನಿವ್ವಳ ಲಾಭ ರೂ. 2,818 ಕೋಟಿಗಳಿಗೆ ಏರಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ, ಬ್ಯಾಂಕಿನ ಒಟ್ಟು ವರಮಾನ ರೂ. 21,145 ಕೋಟಿಗಳಿಂದ  ರೂ. 24,726 ಕೋಟಿಗಳಿಗೆ ಪ್ರಗತಿ ಕಂಡಿದೆ  ಎಂದು ಮುಂಬೈ ಷೇರುಪೇಟೆಗೆ ಸಲ್ಲಿಸಲಾಗಿರುವ ವರದಿಯಲ್ಲಿ ‘ಎಸ್‌ಬಿಐ’ ತಿಳಿಸಿದೆ.

ಕಳೆದ 9 ತಿಂಗಳ ಅವಧಿಯಲ್ಲಿ  ಬ್ಯಾಂಕ್ ರೂ. 8,243 ಕೋಟಿ ನಿವ್ವಳ ಲಾಭ ದಾಖಲಿಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 12.93ರಷ್ಟು ಪ್ರಗತಿ ಕಂಡಿದೆ.  ನಿವ್ವಳ ಪ್ರಗತಿ ಕೂಡ ಶೇ 22ರಷ್ಟು ಹೆಚ್ಚಳವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT