ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಬ್ಯಾಂಡ್ ಒಪ್ಪಂದ ರದ್ದು

Last Updated 17 ಫೆಬ್ರುವರಿ 2011, 18:10 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಇಸ್ರೋದ ವಾಣಿಜ್ಯ ಘಟಕ ಅಂತರಿಕ್ಷ್ ಮತ್ತು ಖಾಸಗಿ ಸಂಸ್ಥೆ ದೇವಾಸ್ ಮಲ್ಟಿಮೀಡಿಯಾ ನಡುವೆ ನಡೆದಿದ್ದ ವಿವಾದಾತ್ಮಕ ಎಸ್-ಬ್ಯಾಂಡ್ ಒಪ್ಪಂದವನ್ನು ಗುರುವಾರ ರದ್ದು ಪಡಿಸಲಾಗಿದೆ.

ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಮೇಲಿನ ಸಂಪುಟ ಸಮಿತಿ ಬಾಹ್ಯಾಕಾಶ ಆಯೋಗ ಮಾಡಿದ ಶಿಫಾರಸಿನ ಅನ್ವಯ ಈ ತೀರ್ಮಾನ ಕೈಗೊಳ್ಳಲಾಗಿದೆ.

70 ಮೆಗಾಹರ್ಡ್ಸ್ ಎಸ್-ಬ್ಯಾಂಡ್‌ನ ತರಂಗಾಂತರವನ್ನು ಖಾಸಗಿ ಸಂಸ್ಥೆಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೆ ಹಂಚಲು ಮಾಡಿಕೊಂಡಿದ್ದ ಒಪ್ಪಂದ ಈಗ ವಿವಾದಕ್ಕೆ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಮಹಾಲೇಖಪಾಲರು (ಸಿಎಜಿ) ಸಹ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಕೆಲವು ಅಂದಾಜಿನ ಪ್ರಕಾರ ಈ ಒಪ್ಪಂದದಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು ರೂ 2 ಲಕ್ಷ ಕೋಟಿ  ನಷ್ಟ ಉಂಟಾಗಿತ್ತು. ಆದಾಯ ನಷ್ಟ ಆಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದ ನಂತರ ಸರ್ಕಾರ ಮತ್ತು ಇಸ್ರೋ ಎರಡೂ ಈ ಒಪ್ಪಂದವನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದವು.

‘ತಡವಾದ ಕ್ರಮ’: ಎಸ್-ಬ್ಯಾಂಡ್ ಹಂಚಿಕೆ ಒಪ್ಪಂದ ರದ್ದು ಮಾಡಿರುವ ಸಂಪುಟ ಸಮಿತಿ ಕ್ರಮ ತಡವಾಗಿ ತೆಗೆದುಕೊಂಡ ನಿರ್ಧಾರ ಎಂದು ಸಂಸತ್ತಿನ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಮುರಳಿ ಮನೋಹರ ಜೋಷಿ  ಅಭಿಪ್ರಾಯಪಟ್ಟಿದ್ದಾರೆ.

ಸಮಗ್ರ ತನಿಖೆ ಆಗಬೇಕು-ಬಿಜೆಪಿ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಈ ಹಗರಣ ಕುರಿತಂತೆ ಸಮಗ್ರ ತನಿಖೆಯ ಅಗತ್ಯವೂ ಇದೆ ಎಂದು ಪಕ್ಷದ ವಕ್ತಾರೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT