ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಕ್ರಿಕೆಟ್ ರ‌್ಯಾಂಕಿಂಗ್: ಭಾರತಕ್ಕೆ ಮೂರನೇ ಸ್ಥಾನ

Last Updated 26 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ದುಬೈ (ಐಎಎನ್‌ಎಸ್/ಪಿಟಿಐ): ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು 5-0 ರಲ್ಲಿ ತನ್ನದಾಗಿಸಿಕೊಂಡ ಭಾರತ ತಂಡ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಏಕದಿನ ರ‌್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೇರಿದೆ. ಮಹೇಂದ್ರ ಸಿಂಗ್ ದೋನಿ ಬಳಗ ಈಗ 118 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದೆ.

ಇಂಗ್ಲೆಂಡ್ ವಿರುದ್ಧದ ಸರಣಿಗೆ ಮುನ್ನ ಭಾರತ 106 ಪಾಯಿಂಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿತ್ತು. ಆಸ್ಟ್ರೇಲಿಯ 129 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಶ್ರೀಲಂಕಾ (119) ಬಳಿಕದ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ (117) ಮತ್ತು ಇಂಗ್ಲೆಂಡ್ (106) ನಾಲ್ಕು ಹಾಗೂ ಐದನೇ ಸ್ಥಾನಗಳಲ್ಲಿವೆ.

ಭಾರತ ತಂಡದ ನಾಯಕ ದೋನಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎರಡು ಕ್ರಮಾಂಕ ಮೇಲಕ್ಕೇರಿದ್ದು, ಮೂರನೇ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ದೋನಿ, `ಸರಣಿ ಶ್ರೇಷ್ಠ~ ಪ್ರಶಸ್ತಿ ಪಡೆದಿದ್ದರು. ಆಫ್ ಸ್ಪಿನ್ನರ್ ಆರ್. ಅಶ್ವಿನ್ ಇದೇ ಮೊದಲ ಬಾರಿಗೆ ಅಗ್ರ 20 ರಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳುನಾಡಿನ ಈ ಬೌಲರ್ 16 ಕ್ರಮಾಂಕ ಮೇಲಕ್ಕೇರಿದ್ದು, 20ನೇ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT