ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಪಂದ್ಯಗಳಿಗೆ ಸಚಿನ್ ನಿವೃತ್ತಿ

Last Updated 23 ಡಿಸೆಂಬರ್ 2012, 9:35 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ):  ಕ್ರಿಕೆಟ್ `ದೇವರು' ಎಂದೇ ಮನೆ ಮಾತಾಗಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ 23 ವರ್ಷಗಳ ಏಕದಿನ ಕ್ರಿಕೆಟ್ ಜೀವನಕ್ಕೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ.

`ಭಾರತಕ್ಕೆ ವಿಶ್ವಕಪ್ ತಂದುಕೊಡುವ ನನ್ನ ಕನಸು ಈಡೇರಿತು. ಆಗಾಗಿ ಏಕದಿನ ಪಂದ್ಯಗಳಿಗೆ ನಿವೃತ್ತಿ ಘೋಷಿಸಿರುವುದಾಗಿ ಸಚಿನ್ ತಿಳಿಸಿದ್ದಾರೆ. 23 ವರ್ಷಗಳ ಕ್ರಿಕೆಟ್ ಜೀವನದಲ್ಲಿ ನನ್ನ ಬೆಂಬಲಿಸಿ, ಪ್ರೋತ್ಸಾಹ ನೀಡಿ ಬೆಳೆಸಿದ ಎಲ್ಲರಿಗೂ ಮತ್ತು ಕ್ರಿಕೆಟ್ ಪ್ರೇಮಿಗಳಿಗೆ   ನನ್ನ ಧನ್ಯವಾದಗಳು ಎಂದು ಸಚಿನ್ ತಿಳಿಸಿದ್ದಾರೆ.

ಸಚಿನ್ ಏಕದಿನ ಪಂದ್ಯಗಳಿಗೆ ಮಾತ್ರ ನಿವೃತ್ತಿ ಘೋಷಿಸಿದ್ದು, ಟೆಸ್ಟ್ ಪಂದ್ಯಗಳಿಗೆ ನಿವೃತ್ತಿ ಘೋಷಿಸಿಲ್ಲ. ಇದೇ ಸಂದರ್ಭದಲ್ಲಿ ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡ ಅತ್ಯುತ್ತಮ ಸಾಧನೆ ಮಾಡಲಿ ಎಂದು ಆಶಿಸಿದ್ದಾರೆ.

1989ರಲ್ಲಿ ಏಕದಿನ ಪಂದ್ಯಗಳಿಗೆ ಸಚಿನ್ ಪಾದಾರ್ಪಣೆ ಮಾಡಿದ್ದರು. 463 ಏಕದಿನ ಪಂದ್ಯಗಳನ್ನು ಆಡಿರುವ ಸಚಿನ್ 44.88ರ ಸರಾಸರಿಯಲ್ಲಿ 18 ,426 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 49 ಶತಕ ಮತ್ತು 96 ಅರ್ಧಶತಕಗಳು ಸೇರಿವೆ. 154 ವಿಕೆಟ್ ಕಬಳಿಸುವ ಮೂಲಕ ಉತ್ತಮ ಸ್ಪಿನ್ ಬೌಲಿಂಗ್‌ನಲ್ಲೂ ಸಚಿನ್ ಮೋಡಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT