ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್ ಜೂನಿಯರ್ ವಾಲಿಬಾಲ್ : ಕ್ವಾರ್ಟರ್ ಫೈನಲ್‌ಗೆ ಭಾರತ

Last Updated 2 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಉರೆಮಿಯಾ, ಇರಾನ್: ಭಾರತ ತಂಡದವರು ಇಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಜೂನಿಯರ್ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ, ಮಂಗಳವಾರ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡದವರು 26-28, 13-25, 22-25ರಲ್ಲಿ ಇರಾನ್ ಎದುರು ಸೋಲು ಕಂಡರೂ ಎಂಟರ ಘಟ್ಟದಲ್ಲಿ ಆಡಲು ಅವಕಾಶ ಪಡೆದುಕೊಂಡರು.

ಏಕೆಂದರೆ ಭಾರತ ಲೀಗ್ ಹಂತದಲ್ಲಿ ಉಜ್ಬೆಕಿಸ್ತಾನ, ಚೀನಾ ತೈಪಿ ಹಾಗೂ ಆಸ್ಟ್ರೇಲಿಯಾ ಎದುರು ಗೆಲುವು ಸಾಧಿಸಿತ್ತು. ಭಾರತ ತಂಡ ಕ್ವಾರ್ಟರ್ ಫೈನಲ್‌ನಲ್ಲಿ ಕೊರಿಯಾ ಎದುರು ಪೈಪೋಟಿ ನಡೆಸಲಿದೆ.

ಮಹಿಳೆಯರು ಶುಭಾರಂಭ: ಭಾರತ ಮಹಿಳಾ ತಂಡದವರು ಬ್ಯಾಂಕಾಕ್‌ನಲ್ಲಿ ಆರಂಭವಾದ16ನೇ ಏಷ್ಯನ್ ಜೂನಿಯರ್ ವಾಲಿಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ಅವರು 25-19, 25-20. 25-18ರಲ್ಲಿ ವಿಯೆಟ್ನಾಂ ಎದುರು ಗೆದ್ದರು. ಶಿಲ್ಪಾ ಹಾಗೂ ಆತಿರಾ ಉತ್ತಮ ಪ್ರದರ್ಶನ ತೋರಿದರು. ಭಾರತ ತನ್ನ ಮುಂದಿನ ಪಂದ್ಯವನ್ನು ಮಾಂಗೋಲಿಯಾ ಎದುರು ಆಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT