ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಂಎಫ್: ಚೆಂಡು ಪ್ರಧಾನಿ ಅಂಗಳದಲ್ಲಿ?

Last Updated 9 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಸ್ಪರ್ಧಿಸುತ್ತಿರುವರಲ್ಲಿ  ಯಾರಿಗೆ ಮತ ಹಾಕಬೇಕು ಎನ್ನುವುದನ್ನು  ಅಂತಿಮವಾಗಿ ಪ್ರಧಾನಿ ನಿರ್ಧರಿಸಲಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ.

ಇತ್ತೀಚೆಗೆಷ್ಟೇ ಫ್ರಾನ್ಸ್‌ನ ಹಣಕಾಸು ಸಚಿವೆ ಕ್ರಿಸ್ಟೀನ್ ಲಗಾರ್ಡೆ ಮತ್ತು ಮೆಕ್ಸಿಕನ್ ಸೆಂಟ್ರಲ್ ಬ್ಯಾಂಕಿನ ಗವರ್ನರ್ ಅಗಸ್ಟಿನ್ ಕ್ರಿಸ್ಟೀನ್ಸ್ ಅವರು ಭಾರತಕ್ಕೆ ಭೇಟಿ ನೀಡಿದ್ದು, `ಐಎಂಎಫ್~  ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಬೆಂಬಲ ಕೋರಿದ್ದರು. `ಭಾರತದ ಮತ ಯಾವ ಅಭ್ಯರ್ಥಿಗೆ ಎನ್ನುವುದು ಪ್ರಧಾನಿಗಳ ಮಟ್ಟದಲ್ಲಿ ನಿರ್ಧಾರವಾಗುತ್ತದೆ. ಸದ್ಯ ನಾವು ಯಾರು ಯಾರು ಸ್ಪರ್ಧೆಯಲ್ಲಿದ್ದಾರೆ ಎನ್ನವುದನ್ನು ಮಾತ್ರ ಗಮನಿಸುತ್ತಿದ್ದೇವೆ~ ಎಂದು ಪ್ರಣವ್ ಹೇಳಿದ್ದಾರೆ.

ಲಗಾರ್ಡೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಭಾರತವು ಅವರಿಗೆ ಯಾವುದೇ ಭರವಸೆಯನ್ನು ನೀಡಲಿಲ್ಲ ಎಂದು ಪ್ರಣವ್ ಸ್ಪಷ್ಟಪಡಿಸಿದ್ದರು.`ಬ್ರಿಕ್~ ದೇಶಗಳಿಂದ ಸಾಮಾನ್ಯ ಅಭ್ಯರ್ಥಿಯೊಬ್ಬರನ್ನು ಹೆಸರಿಸುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ ಎಂದು ಪ್ರತಿಕ್ರಿಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT