ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಸ್ ದಂಪತಿ ಆಸ್ತಿ ಮುಟ್ಟುಗೋಲು

Last Updated 4 ಫೆಬ್ರುವರಿ 2011, 16:30 IST
ಅಕ್ಷರ ಗಾತ್ರ

ಭೋಪಾಲ್ (ಪಿಟಿಐ): ಅಮಾನತುಗೊಂಡಿರುವ ಮಧ್ಯಪ್ರದೇಶದ ಐಎಎಸ್ ದಂಪತಿ ಅರವಿಂದ ಮತ್ತು ಟೀನು ಜೋಷಿ ಅವರ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದ್ದು ಅವರಿಬ್ಬರ 77 ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ  ಸ್ಥಗಿತಗೊಳಿಸಿದೆ.

1961ರ ಆದಾಯ ತೆರಿಗೆ ಕಾಯ್ದೆಯ  ಸೆಕ್ಷನ್ 281-ಬಿ ಅನ್ವಯ ಈ ಕ್ರಮ ಜರುಗಿಸಲಾಗಿದ್ದು, ತನಿಖೆ ಪೂರ್ಣಗೊಳ್ಳುವ ವರೆಗೆ ಕಳಂಕಿತ ಅಧಿಕಾರಿಗಳು ತಮ್ಮ ಆಸ್ತಿಯ ಮಾರಾಟ ಹಾಗೂ ಬ್ಯಾಂಕ್ ಖಾತೆಗಳನ್ನು ಬಳಸುವಂತಿಲ್ಲ ಎಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ತಿಳಿಸಿವೆ.

ಕಳೆದ ವರ್ಷ ಫೆಬ್ರುವರಿಯಲ್ಲಿ ಈ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಮೂರು ಕೋಟಿ ರೂಪಾಯಿ ನಗದು ಹಣ ವಶಪಡಿಸಿಕೊಂಡಿದ್ದರು. ಇದೇ ಸಂದರ್ಭದಲ್ಲಿ 360 ಕೋಟಿ ರೂಪಾಯಿ ಹೂಡಿಕೆಯ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT