ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ.ಟಿ ಅಭಿವೃದ್ಧಿಗೆ ಎಲೆಕ್ಟ್ರಾನಿಕ್ ನಿಧಿ

Last Updated 11 ಮೇ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಾಹಿತಿ ತಂತ್ರಜ್ಞಾನ ವಲಯದ (ಐ.ಟಿ) ಸಂಶೋಧನೆ, ಆವಿಷ್ಕಾರ ಮತ್ತು ಅಭಿವೃದ್ಧಿ  ಉತ್ತೇಜಿಸಲು `ಎಲೆಕ್ಟ್ರಾನಿಕ್ ಅಭಿವೃದ್ಧಿ ನಿಧಿ~ ಸ್ಥಾಪಿಸುವುದಾಗಿ ಸರ್ಕಾರ ಹೇಳಿದೆ.`2011ರ ರಾಷ್ಟ್ರೀಯ ಎಲೆಕ್ಟ್ರಾನಿಕ್ ಕರಡು ನೀತಿ~ ಆಧರಿಸಿ ಈ ನಿಧಿ ಅಸ್ತಿತ್ವಕ್ಕೆ ಬರಲಿದೆ.

ಮುಖ್ಯವಾಗಿ ಐ.ಟಿ ವಲಯದ ಸಂಶೋಧನೆ ಉತ್ತೇಜಿಸುವುದು ಇದರ ಮುಖ್ಯ ಉದ್ದೇಶ ಎಂದು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಸಚಿನ್ ಪೈಲಟ್ ಲೋಕಸಭೆಗೆ ತಿಳಿಸಿದ್ದರು.ಜತೆಗೆ, ದೇಶದಾದ್ಯಂತ 200 `ಎಲೆಕ್ಟ್ರಾನಿಕ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ಸ್~ (ಇಎಂಸಿಎಸ್) ನಿರ್ಮಿಸಲು ಹಣಕಾಸಿನ ನೆರವು ನೀಡುವ ಕುರಿತೂ ರಾಷ್ಟ್ರೀಯ ಎಲೆಕ್ಟ್ರಾನಿಕ್ ಕರಡು ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದ್ದರು.

ಆಗ್ರಹ: `ದೇಶದ ಮಾಹಿತಿ ತಂತ್ರಜ್ಞಾನ ಉದ್ಯಮ(ಐಟಿ) ತೆರಿಗೆಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು~ ಎಂದು ಮೈಕ್ರೊಸಾಫ್ಟ್ ಇಂಡಿಯ ಅಧ್ಯಕ್ಷ ಭಾಸ್ಕರ್ ಪ್ರಾಮಾಣಿಕ್ ಆಗ್ರಹಿಸಿದ್ದಾರೆ.

ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ `ಟು ದ ಕ್ಲೌಡ್~ ಎಂಬ ಪುಸ್ತಕ ಬಿಡುಗಡೆ ಮಾಡಿದ ಅವರು,ಐ.ಟಿ ವಲಯಕ್ಕೆ ಸುಸ್ಥಿರ ನೀತಿಅಗತ್ಯವಿದೆ. ಸಕ್ರಮವಾಗಿ ಉದ್ಯಮ ನಡೆಸಲು ಬೇಕಾದ ವಾತಾವರಣಸರ್ಕಾರವೇ ಸೃಷ್ಟಿಸಬೇಕಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT