ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ.ಡಿ.ಪೀಠದಲ್ಲಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Last Updated 11 ಡಿಸೆಂಬರ್ 2013, 9:32 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ವಾರ್ಷಿಕ ದತ್ತ ಜಯಂತಿ ಹಿನ್ನೆಲೆಯಲ್ಲಿ ಐ.ಡಿ.ಪೀಠದ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಬಿ.ಎಸ್.ಶೇಖರಪ್ಪ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ಸೇರಿದಂತೆ ವಿವಿಧ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ ಅವರು ಐ.ಡಿ ಪೀಠದ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 14ರಿಂದ 16ವರೆಗೆ ನಡೆಯಲ್ಲಿರುವ ದತ್ತಮಾಲಾ ಅಭಿಯಾನ ಮತ್ತು ದತ್ತ ಜಯಂತಿ ಉತ್ಸವಕ್ಕೆ ಆಗಮಿಸಲಿರುವ ಭಕ್ತಾದಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವ ತಯಾರಿಯನ್ನು ಖುದ್ದು ವೀಕ್ಷಿಸಿದರು.

ದತ್ತಜಯಂತಿಗೆ ಬರುವ ಭಕ್ತರಿಗೆ ವಸತಿ, ಕುಡಿಯುವ ನೀರು, ಆರೋಗ್ಯ ಸೌಲಭ್ಯ ಸೇರಿದಂತೆ ಅಂಬುಲೆನ್ಸ್‌ ಮತ್ತಿತರ ಮೂಲಸೌಕರ್ಯ ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ದತ್ತ ಜಯಂತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹೆಚ್ಚಿನ ಪೊಲೀಸ್ ಬಂದೋಬಸ್ತ ಆಯೋಜಿಸುವಂತೆ ಸೂಚನೆ ನೀಡಿದರು.

ಇದೇ ವೇಳೆ ನಗರದಿಂದ ಐ.ಡಿ ಪೀಠಕ್ಕೆ ತೆರಳುವ ರಸ್ತೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ದತ್ತ ಜಯಂತಿ ಮುಗಿಯುವವರೆಗೂ ತಾತ್ಕಾಲಿಕವಾಗಿ ರಸ್ತೆ ಕಾಮಗಾರಿ ನಿಲ್ಲಿಸುವಂತೆ ಹಾಗೂ ಕೈಮರ ಚೆಕ್‌ಪೋಸ್ಟ್‌ನಲ್ಲಿ ವಾಹನ ನಿಲುಗಡೆಗೆ ಸ್ಥಳ ಮತ್ತು ಪ್ರವಾಸಿ ಮಾಹಿತಿ ಕೇಂದ್ರವನ್ನು ತೆರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಗಾಳಿಕೆರೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ಸ್ಥಳ ಪರಿಶೀಲನೆ ಸಹ ನಡೆಸಿದ ಅವರು ಐ.ಡಿ. ಪೀಠ ಮಾರ್ಗದಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಸೂಕ್ತ ಜಾಗ ಗುರುತಿಸಲು ತಹಸೀಲ್ದಾರರಿಗೆ ಸೂಚನೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಪಿಹೊನಕೇರಿ, ತಹಸೀಲ್ದಾರ್ ಶಿವೇಗೌಡ, ಮುಜರಾಯಿ ತಹಸೀಲ್ದಾರ್, ಪ್ರವಾಸೋದ್ಯಮ ಇಲಾಖಾ ಅಧಿಕಾರಿ ಪ್ರಕಾಶ್, ಮೆಸ್ಕಾಂ, ಜಿಲ್ಲಾ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ, ಕಾರ್ಯಪಾಲಕ ಎಂಜಿನಿಯರ್‌ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT