ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಒಗ್ಗೂಡಿ ಹೋರಾಡಿದರೆ ಮಾತ್ರ ಸವಲತ್ತು'

Last Updated 25 ಡಿಸೆಂಬರ್ 2012, 19:49 IST
ಅಕ್ಷರ ಗಾತ್ರ

ಬೆಂಗಳೂರು: `ನೇಕಾರ ಸಮುದಾಯವು ಹಲವು ಉಪ ಪಂಗಡಗಳಾಗಿ ಹಂಚಿ ಹೋಗಿರುವುದರಿಂದ ಸಾಮಾಜಿಕವಾಗಿ ಹಿಂದುಳಿದಿದೆ' ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ ಅವರು ಹೇಳಿದರು.

ಸಂಯುಕ್ತ ಸ್ವಕುಳಸಾಳಿ ಸಂಘವು ನಗರದ ಕೇಂಗೇರಿಯಲ್ಲಿ ಏರ್ಪಡಿಸಿದ್ದ `ಕರ್ನಾಟಕ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರ ಹಾಗೂ ನಿವೃತ್ತರ ಸಂಘಟನಾ ಸಮಾವೇಶ'ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

`ಸ್ವಕುಳಸಾಳಿ, ದೇವಾಂಗ, ಪದ್ಮಸಾಲಿ, ಕುರುಹಿನ ಶೆಟ್ಟಿ. ತೊಗಟವೀರ ಹಾಗೂ ಪಟ್ಟಸಾಲಿ ಈ ಎಲ್ಲ ನೇಕಾರ ಸಮುದಾಯದವರು ಒಗ್ಗೂಡಿ ಹೋರಾಟವನ್ನು ನಡೆಸಿದರೆ ಮಾತ್ರ ಸರ್ಕಾರದಿಂದ ಹೆಚ್ಚು ಸವಲತ್ತುಗಳನ್ನು ಪಡೆಯಬಹುದು' ಎಂದರು.

ಕರ್ನಾಟಕ ಸ್ವಕುಳಸಾಳಿ ಸಮಾಜದ ಅಧ್ಯಕ್ಷ ಚಂದ್ರಕಾಂತ ಭಂಡಾರೆ ಅವರು ಮಾತನಾಡಿ, `ಪ್ರತಿಯೊಬ್ಬರೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದ ಕೊನೆಯ ವ್ಯಕ್ತಿಗೂ ಅಭಿವೃದ್ಧಿಯ ಸವಲತ್ತುಗಳನ್ನು ಮುಟ್ಟಿಸಲು ಪ್ರಯತ್ನ ಮಾಡಬೇಕು' ಎಂದರು.

ಕಾರ್ಯಕ್ರಮದಲ್ಲಿ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಪ್ರದೀಪ ರೋಖಡೆ ಅವರ `ಸೆಡವು' ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಸರ್ಕಾರಿ ಸೇವೆಯಿಂದ ನಿವೃತ್ತರಾದ ಸಮಾಜದ ಹಲವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT