ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಕ್ ಕೂಟ ಬಹಿಷ್ಕರಿಸಿ

Last Updated 1 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): `ಡೌ ಕೆಮಿಕಲ್ಸ್~ ಕಂಪೆನಿಯನ್ನು ಪ್ರಾಯೋಜಕತ್ವದಿಂದ ಕೈಬಿಡದಿದ್ದರೆ ಲಂಡನ್ ಒಲಿಂಪಿಕ್ ಕೂಟವನ್ನು ಭಾರತ ಬಹಿಷ್ಕರಿಸಬೇಕು ಎಂದು ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಅಥ್ಲೀಟ್‌ಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ.

`ಭಾರತದ ಎಲ್ಲ ಅಂಗವಿಕಲ ಅಥ್ಲೀಟ್‌ಗಳು 2012ರ ಲಂಡನ್ ಪ್ಯಾರಾಲಿಂಪಿಕ್ ಕೂಟವನ್ನು ಬಹಿಷ್ಕರಿಸಲು ಮುಂದಾಗಬೇಕು~ ಎಂದು ಹರಿಯಾಣ ಪ್ಯಾರಾಲಿಂಪಿಕ್ ಸಂಸ್ಥೆ ಕಾರ್ಯದರ್ಶಿ ಗಿರಾಜ್ ಸಿಂಗ್ ಹೇಳಿದ್ದಾರೆ.
`ಭಾರತ ಒಲಿಂಪಿಕ್ ಸಂಸ್ಥೆ ಮತ್ತು ಕ್ರೀಡಾ ಸಚಿವಾಲಯವು ಡೌ ಕಂಪೆನಿಯ ಪ್ರಾಯೋಜಕತ್ವದ ವಿರುದ್ಧದ ತನ್ನ ಪ್ರತಿಭಟನೆಯನ್ನು ಇನ್ನಷ್ಟು ಹೆಚ್ಚಿಸಬೇಕು~ ಎಂದು ಅವರು ತಿಳಿಸಿದ್ದಾರೆ.

`ಡೌ ಕೆಮಿಕಲ್ಸ್~ ಕಂಪೆನಿ ಲಂಡನ್ ಒಲಿಂಪಿಕ್ ಕ್ರೀಡೆಗಳ ಪ್ರಾಯೋಜಕ ಸಂಸ್ಥೆಗಳಲ್ಲಿ ಒಂದಾಗಿದೆ. ಭೋಪಾಲ ಅನಿಲ ದುರಂತಕ್ಕೆ ಕಾರಣವಾಗಿದ್ದ ಯೂನಿಯನ್ ಕಾರ್ಬೈಡ್ ಸಂಸ್ಥೆಯನ್ನು ಈ ಕಂಪೆನಿ 1999 ರಲ್ಲಿ ಕೊಂಡುಕೊಂಡಿತ್ತು. ಈ ಕಾರಣ ಭಾರತ ಕಂಪೆನಿಯ ಪ್ರಾಯೋಜಕತ್ವವನ್ನು ವಿರೋಧಿಸುತ್ತಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT