ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಕ್ ಕೂಟದಲ್ಲಿ ಮುಸ್ಲಿಮ್ ಮಹಿಳೆಯರು; ಒಬಾಮ ಮೆಚ್ಚುಗೆ

Last Updated 11 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಎಎಫ್‌ಪಿ): ಲಂಡನ್ ಒಲಿಂಪಿಕ್ಸ್‌ನಲ್ಲಿ ಮುಸ್ಲಿಮ್ ದೇಶಗಳ ಮಹಿಳಾ ಅಥ್ಲೀಟ್‌ಗಳು ಪಾಲ್ಗೊಂಡಿದ್ದಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

`ಒಲಿಂಪಿಕ್ಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿ ಪ್ರತಿ ದೇಶದ ತಂಡದಲ್ಲಿ ಮಹಿಳೆಯರಿಗೆ ಸ್ಥಾನ ನೀಡಲಾಗಿದೆ. ಅದರಲ್ಲೂ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿರುವ ದೇಶಗಳ ಪ್ರತಿ ತಂಡದಲ್ಲಿ ಮಹಿಳಾ ಅಥ್ಲೀಟ್‌ಗಳು ಇದ್ದರು. ಇದೊಂದು ಗಮನಾರ್ಹ ವಿಷಯ. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಲೇಬೇಕು~ ಎಂದು ಅವರು ನುಡಿದಿದ್ದಾರೆ.

ಈ ಒಲಿಂಪಿಕ್ಸ್‌ನಲ್ಲಿ ಮಧ್ಯಮ ದೂರದ ಓಟಗಾರ್ತಿ ಸಾರಾ ಅತ್ತರ್ ಐತಿಹಾಸಿಕ ಸಾಧನೆಯೊಂದಕ್ಕೆ ಕಾರಣರಾದರು. ಏಕೆಂದರೆ ಸೌದಿ ಅರೇಬಿಯಾವನ್ನು ಪ್ರತಿನಿಧಿಸಿದ ಮೊದಲ ಮಹಿಳೆ ಎನಿಸಿದರು.

`ಇದೊಂದು ಐತಿಹಾಸಿಕ ಕ್ಷಣ. ಇದು ದೇಶದಲ್ಲಿ ಹೊಸ ಯುಗಕ್ಕೆ ಕಾರಣವಾಗಲಿದೆ. ಇದೊಂದು ದೊಡ್ಡ ಹೆಜ್ಜೆ. ಇದೊಂದು ಅಮೋಘ ಅನುಭವ~ ಎಂದು ಅತ್ತರ್ ನುಡಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT