ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓದಿನಷ್ಟೇ ದೈಹಿಕ ಶ್ರಮವೂ ಮುಖ್ಯ

Last Updated 13 ಫೆಬ್ರುವರಿ 2011, 11:05 IST
ಅಕ್ಷರ ಗಾತ್ರ

 ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಪಠ್ಯ-ಪುಸ್ತಕದ ಶಿಕ್ಷಣದ ಜೊತೆಗೆ ದೈಹಿತ ಅಭ್ಯಾಸಕ್ಕೂ ಹೆಚ್ಚಿನ ಒತ್ತು ನೀಡಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಅಭ್ಯಾಸ ಮತ್ತು ಕ್ರೀಡಾಕೂಟ ಮುಖ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ.ಪವಾರ್ ತಿಳಿಸಿದರು.

ನಗರದ ಎಸ್‌ಜೆಸಿಐಟಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಏಕವಲಯ ಗುಡ್ಡಗಾಡು ಓಟದ ಸ್ಪರ್ಧೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬುದ್ಧಿಶಕ್ತಿಯ ಜೊತೆಜೊತೆಗೆ ದೈಹಿಕ ಶ್ರಮಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ದೈಹಿಕ ಪರಿಶ್ರಮಪಟ್ಟಲ್ಲಿ ಕ್ರೀಡಾಕೂಟಗಳಲ್ಲಿ ಜಯ ಸಾಧಿಸಲು ಸಾಧ್ಯವಾಗುತ್ತದೆ. ಹೆಚ್ಚಿನ ಸಾಧನೆ ಮಾಡಲು ಅವಕಾಶ ಸಿಗುತ್ತದೆ ಎಂದು ಅವರು ಹೇಳಿದರು.

ಆದಿಚುಂಚನಗಿರಿ ಶಾಖಾ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಾಂಶುಪಾಲ ಟಿ.ಮುನಿಕೆಂಚೇಗೌಡ, ಕುಲಸಚಿವ ಬಿ.ಕೆ..ಉಮೇಶ್, ಉಪನ್ಯಾಸಕರಾದ ಪ್ರೊ. ವಿಜಯಕುಮಾರ್, ಡಾ. ಜಿ.ಗೋಪಾಲರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT