ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾಯ ವಸೂಲಾತಿಯಲ್ಲಿ ಹಿಂದೆ

Last Updated 23 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ಚಿಕ್ಕಬಾಣಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಬಹುಮಹಡಿ ಕಟ್ಟಡಗಳು, ಉನ್ನತ ಶಿಕ್ಷಣ ಕಾಲೇಜುಗಳು ಸೇರಿದಂತೆ ಅಧಿಕವಾಗಿ ಆದಾಯ ಬರುವ ಆಸ್ತಿಗಳಿದ್ದರೂ ಕಂದಾಯ ವಸೂಲಿ ಮಾಡುವಲ್ಲಿ ಅಧಿಕಾರಿಗಳು ಹಿಂದೆ ಬಿದ್ದಿದ್ದಾರೆ ಎಂದು ಶಾಸಕ ಎಸ್. ಮುನಿರಾಜು ಕಿಡಿ ಕಾರಿದರು.

ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಚಿಕ್ಕಬಾಣಾವರ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ನಡೆದ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಸಭೆಯನ್ನು ಸಕಾಲದಲ್ಲಿ ನಡೆಸದೆ ತಡವಾಗಿ ಕಾಟಾಚಾರಕ್ಕೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮುಂದಿನ ಸಭೆಯನ್ನು ಸಮಯಕ್ಕೆ ಸರಿಯಾಗಿ ನಡೆಸಿ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸುವಂತೆ ಅವರು ಸಲಹೆ ಮಾಡಿದರು. ಸಭೆಯಲ್ಲಿ ಕಸ ವಿಲೇವಾರಿ, ಆರೋಗ್ಯ ಇಲಾಖೆಯ ನಿರ್ಲಕ್ಷ್ಯ, ಪಡಿತರ ಚೀಟಿ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಪ್ರಶ್ನೆಗಳ ಸುರಿಮಳೆಗರೆದಾಗ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು.

ಉತ್ತರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಾಂದ್ ಪಾಷಾ, ಸದಸ್ಯೆ ಶಾಂತಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎನ್.ಹನುಮಂತಪ್ಪ, ಮಾಜಿ ಅಧ್ಯಕ್ಷ ಕಬೀರ್, ಉಪಾಧ್ಯಕ್ಷ ಬಿ.ವಿ.ಜಯರಾಮ್, ನಗರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕರಿಯಪ್ಪ, ಕಾರ್ಯನಿರ್ವಹಣಾಧಿಕಾರಿ ಅನಂತು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ನವೀನ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಬಿ.ಮಂಜುನಾಥ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT