ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಚ್ಚಾತೈಲ ಬೆಲೆ ಏರಿಕೆ ಭೀತಿ

Last Updated 8 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಡಾಲರ್ ವಿರುದ್ಧ ರೂಪಾಯಿ ವಿನಿಮಯ ಮೌಲ್ಯ ಕುಸಿತ, ವಿದೇಶಿ ಸಾಂಸ್ಥಿಕ ಹೂಡಿಕೆದಾರರ (ಎಫ್‌ಐಐ) ಚಟುವಟಿಕೆ ಈ ವಾರದ ಷೇರುಪೇಟೆ ಏರಿಳಿತ ನಿರ್ಧರಿಸಲಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಷೇರುಪೇಟೆಗೆ ರಜೆ. ಸೆ.9ರಂದು ವಹಿವಾಟು ನಡೆಯುವುದಿಲ್ಲ. ಕೈಗಾರಿಕಾ ಪ್ರಗತಿ ಸೂಚ್ಯಂಕ (ಐಐಪಿ) ಮತ್ತು ಗ್ರಾಹಕ ಬೆಲೆ ಆಧರಿಸಿದ (ಸಿಪಿಐ)  ಹಣದುಬ್ಬರ ಅಂಕಿ ಅಂಶಗಳು ಗುರುವಾರ ಪ್ರಕಟಗೊಳ್ಳಲಿವೆ. ಈ ಅಂಕಿ ಅಂಶಗಳನ್ನು ಆಧರಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಸೆ.20ರಂದು ಹಣಕಾಸು ನೀತಿ ಪರಾಮರ್ಶೆ ಪ್ರಕಟಿಸಲಿದೆ.

ಹೀಗಾಗಿ `ಐಐಪಿ' ಮತ್ತು `ಸಿಪಿಐ' ಪೇಟೆಯ ಮೇಲೆ ಗರಿಷ್ಠ ಮಟ್ಟದ ಪ್ರಭಾವ ಬೀರಬಹುದು ಎಂದು ಬೊನಾಂಜಾ ಪೋರ್ಟ್‌ಪೊಲಿಯೊ ಸಂಸ್ಥೆಯ ಉಪಾಧ್ಯಕ್ಷ ರಾಕೇಶ್ ಗೋಯಲ್ ಅಭಿಪ್ರಾಯಪಟ್ಟಿದ್ದಾರೆ.
ಸಿರಿಯಾ ಬಿಕ್ಕಟ್ಟಿನಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಹೆಚ್ಚುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT