ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡ ಕಾರ್ಮಿಕರ ಭದ್ರತೆಗೆ ಒತ್ತಾಯ

Last Updated 3 ಜನವರಿ 2012, 19:30 IST
ಅಕ್ಷರ ಗಾತ್ರ

ನಾಯಕನಹಟ್ಟಿ:  ದೇಶದಲ್ಲಿ ಕಟ್ಟಡ ಕಾರ್ಮಿಕರ ಬದುಕಿಗೆ ಭದ್ರತೆ ಇಲ್ಲದೇ ಇರುವುದು ಸರ್ಕಾರಗಳ ನಿರ್ಲಕ್ಷ್ಯ ಭಾವನೆಗೆ ಹಿಡಿದ ಕನ್ನಡಿಯಾಗಿದೆ ಎಂದು ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ಸಂಘಟನಾ ಕಾರ್ಯದರ್ಶಿ ಧನಶೇಖರ ಆಕ್ರೋಶ ವ್ಯಕ್ತಪಡಿಸಿದರು.

 ಇಲ್ಲಿನ ಶಾದಿ ಮಹಲ್‌ನಲ್ಲಿ ಮಂಗಳವಾರ ನಡೆದ ನಾಯಕನಹಟ್ಟಿ ಹೋಬಳಿಮಟ್ಟದ ಕಟ್ಟಡ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಕಾರ್ಮಿಕರು ಬೆವರು ಸುರಿಸಿ ದುಡಿಯುತ್ತಿದ್ದರೂ ಸರ್ಕಾರದ ಸೌಲಭ್ಯ ದೊರಕದೇ ವಂಚಿತರಾಗಿದ್ದಾರೆ. ಸರ್ಕಾರ ಶ್ರಮಿಕರನ್ನು ಗಂಭೀರವಾಗಿ ಪರಿಗಣಿಸಿ ಸಾಮಾಜಿಕ ಭದ್ರತೆಗಾಗಿ ಸವಲತ್ತುಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾರ್ಮಿಕರಿಗಾಗಿ ಕಲ್ಯಾಣ ಮಂಡಳಿ ಇದ್ದು, ಸದಸ್ಯತ್ವ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ, ಗರ್ಭಿಣಿಯರಿಗೆ ಹೆರಿಗೆ ಭತ್ಯೆ ಮುಂತಾದ ಸವಲತ್ತು ನೀಡುತ್ತಿದೆ. ಕಾರ್ಮಿಕರು ಇಂತಹ ಸವಲತ್ತು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣೇಶ್ ಮಾತನಾಡಿ, ಸರ್ಕಾರ ಮತ್ತು ಕಲ್ಯಾಣ ಮಂಡಳಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ನೀಡದೇ ಮೋಸ ಮಾಡುತ್ತಿವೆ. ಕೂಲಿ ಕಾರ್ಮಿಕರ ಬವಣೆಗೆ ಕಿಲುಬು ಕಾಸಿನ ಕಿಮ್ಮತ್ತನ್ನು ಸರ್ಕಾರ ತೋರದೇ ಇರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸಂಘದ ಅಧ್ಯಕ್ಷ ವೈ. ಸತ್ಯಪ್ಪ, ಹೋಬಳಿ ಸಂಘದ ಅಧ್ಯಕ್ಷ ಕಾಟಪ್ಪ ನಾಯಕ ಮಾತನಾಡಿದರು.
ಜಿಲ್ಲಾ ಉಪಾಧ್ಯಕ್ಷ ಗಂಗಾಧರ, ಚಳ್ಳಕೆರೆ ತಾಲ್ಲೂಕು ಸಂಘದ ಅಧ್ಯಕ್ಷ ಗೋಪಾಲ, ನಾಯಕನಹಟ್ಟಿ ಹೋಬಳಿ ಘಟಕದ ಉಪಾಧ್ಯಕ್ಷ ಮಹಮದ್ ರಫೀಕ್, ಬಿ. ತಿಪ್ಪೇಸ್ವಾಮಿ, ಟಿ. ಬಸಣ್ಣ, ಎನ್. ಮೂರ್ತಿ, ಎಚ್. ಕೃಷ್ಣಮೂರ್ತಿ ಇತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಶ್ರೀಗುರು ತಿಪ್ಪೇರುದ್ರಸ್ವಾಮಿ ಒಳಮಠದಲ್ಲಿ ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಾರ್ಮಿಕರು ಮೆರವಣಿಗೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT