ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಾ ಜಾಮೀನು ಅರ್ಜಿ: ಇಂದು ಆದೇಶ

Last Updated 16 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೆಐಎಡಿಬಿ ಭೂ ಹಗರಣ ಕ್ಕೆ ಸಂಬಂಧಿಸಿದಂತೆ 2 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲ ಯ ಸೋಮವಾರ ಆದೇಶ ಪ್ರಕಟಿಸಲಿದೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಆರಂಭಿಸಿದ ನ್ಯಾಯಾಲಯ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅವರ ಪುತ್ರ ಕಟ್ಟಾ ಜಗದೀಶ್ ಮತ್ತು ಇಟಾಸ್ಕಾ ಸಾಫ್ಟ್‌ವೇರ್ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಎಸ್. ವಿ.ಶ್ರೀನಿವಾಸ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆಗಸ್ಟ್ 8ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.ಬಳಿಕ ಕಟ್ಟಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಬಳಿಕ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡು ವಂತೆ ಮತ್ತೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ  ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾ ಲಯ ಸೋಮವಾರ ಆದೇಶ ಹೊರಡಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT