ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಾ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ

Last Updated 24 ಅಕ್ಟೋಬರ್ 2011, 8:15 IST
ಅಕ್ಷರ ಗಾತ್ರ

ಬೆಂಗಳೂರು: ಭೂಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದ್ದನ್ನು ಹಾಗೂ ಚಿಕಿತ್ಸೆಗೆ ವಿಧಿಸಿದ ಕೆಲವೊಂದು ಷರತ್ತುಗಳ ರದ್ದತಿ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಅಕ್ಟೋಬರ್ 28 ಮುಂದೂಡಿತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ಪಿಂಟೊ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಿತ್ತು.

`ಕ್ಯಾನ್ಸರ್ ರೋಗಕ್ಕೆ ದೇಶದ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಅದು ಯಶಸ್ವಿಯಾಗುವುದು ಅಪರೂಪ. ಆದುದರಿಂದ ಲಂಡನ್‌ನಲ್ಲಿಯೇ ಚಿಕಿತ್ಸೆ ಮುಂದುವರಿಸಬೇಕು. ದಯವಿಟ್ಟು ಜಾಮೀನು ನೀಡಿ~ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಈ ಹಿಂದೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಈಗ ವೈದ್ಯಕೀಯ ಅಂಶಗಳ ಆಧಾರದ ಮೇಲೆ ಜಾಮೀನು ನೀಡುವಂತೆ ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT