ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಿದ ಚರಂಡಿ: ಹೆಚ್ಚಿದ ದುರ್ವಾಸನೆ

Last Updated 9 ಅಕ್ಟೋಬರ್ 2011, 4:40 IST
ಅಕ್ಷರ ಗಾತ್ರ

ಎಚ್.ಡಿ. ಕೋಟೆ: ಪಟ್ಟಣದ ಬಸ್ ನಿಲ್ದಾಣ ಸಮೀಪ ಹೊಸದಾಗಿ ಚರಂಡಿ ನಿರ್ಮಿಸಿ ಹಲವು ತಿಂಗಳು ಕಳೆದರೂ, ಚರಂಡಿ ನೀರು ಸರಾಗವಾಗಿ ಹರಿಯದೇ ದುರ್ವಾಸನೆ ಬರುತ್ತಿದೆ ಎಂದು ಪಟ್ಟಣದ ನಾಗರಿಕರು ದೂರಿದ್ದಾರೆ.
ಬಸ್ ನಿಲ್ದಾಣ ಮುಂಭಾಗದಲ್ಲಿ ಸಂಗ್ರಹವಾಗುವ ಮಳೆ ನೀರು ಮುಂದೆ ಸಾಗಲು ಈ ಚರಂಡಿ ನಿರ್ಮಿಸಲಾಗಿದೆ.

ಆದರೆ ಆ ಚರಂಡಿ ನೀರು ಹೊರ ಹೋಗಲು ಯಾವುದೇ ಮಾರ್ಗ ನಿರ್ಮಾಣ ಮಾಡಿಲ್ಲ. ಇದರಿಂದ ನೀರು ಒಂದೇ ಕಡೆ ಸಂಗ್ರವಾಗಿ ಕೊಳೆತು ನಾರುತ್ತಿದೆ. ಸುತ್ತಲಿನ ತಾಣ ಸೊಳ್ಳೆಗಳಿಗೆ ಆಶ್ರಯ ನೀಡಿ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದೆ.

ಕೆಎಸ್‌ಆರ್‌ಟಿಸಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್‌ಗಳಿಂದ ಬಾಡಿಗೆ ಪಡೆಯುತ್ತಿದೆ. ಆದರೆ ಆ ಹೊಟೆಲ್‌ನಿಂದ ಉತ್ಪತ್ತಿಯಾಗುವ ತ್ಯಾಜ್ಯ ಹೊರಹೋಗಲು ಸೂಕ್ತ ಸೌಲಭ್ಯ ಕಲ್ಪಿಸುತ್ತಿಲ್ಲ. ನಿಲ್ದಾಣದ ವಾಣಿಜ್ಯ ಮಳಿಗೆಗಳಿಂದ ಲಕ್ಷಾಂತರ ಆದಾಯ ಬರುತ್ತಿದ್ದು, ಆ ಹಣ ಬಳಸಿ ಚರಂಡಿ ಮತ್ತಷ್ಟು ವಿಸ್ತರಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.

ಶನಿವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಸಿ. ಜಗದೀಶ್, ಅಧ್ಯಕ್ಷ ರಫೀಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸೂಕ್ತ ಕ್ರಮದ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT