ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಠಿಣ ಪರಿಶ್ರಮದಿಂದ ಗುರಿ ಸಾಧ್ಯ

Last Updated 2 ಸೆಪ್ಟೆಂಬರ್ 2011, 19:50 IST
ಅಕ್ಷರ ಗಾತ್ರ

ಯಲಹಂಕ: ವಿದ್ಯಾರ್ಥಿಗಳು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಪ್ರಾಮಾಣಿಕತೆ ಹಾದಿಯಲ್ಲಿ ಕಠಿಣ ಶ್ರಮದಿಂದ ಮುನ್ನಡೆದರೆ ತಾವು ಅಂದುಕೊಂಡ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಶೇಷಾದ್ರಿಪುರ ಪ್ರಥಮದರ್ಜೆ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಬಿ.ಆರ್.ಏಕಾಂಬರೇಶ ಹೇಳಿದರು.

ಬಾಗಲೂರು ಮುಖ್ಯರಸ್ತೆ ಸಾತನೂರಿನಲ್ಲಿರುವ ಓಂಕಾರ್ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿನ ಪ್ರಥಮ ವರ್ಷದ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಾಣಿಜ್ಯ ವಿಷಯದಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆಯಾದ  ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗವೆ ಎಂದು ಹೇಳಿದರು.

ಪ್ರಾಂಶುಪಾಲ ಡಾ.ಜಿ.ಸುರೇಶ್ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಅರುಣ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶೇಷಾದ್ರಿಪುರ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೆಂಕಟೇಶ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಸಚಿವ ವರ್ತೂರ್ ಪ್ರಕಾಶ್ ಅವರ ಆಪ್ತ ಕಾರ್ಯದರ್ಶಿ ಪ್ರಸನ್ನಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT