ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಿಮೆ ದರದಲ್ಲಿ ಡೀಸೆಲ್ ಪೂರೈಕೆಗೆ ಮನವಿ

Last Updated 22 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: `ರಾಜ್ಯ ಸಾರಿಗೆ ಸಂಸ್ಥೆಗಳಿಗೆ ಕಡಿಮೆ ದರದಲ್ಲಿ ಡೀಸೆಲ್ ಒದಗಿಸುವಂತೆ ಕೋರಿ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ' ಎಂದು ಸಾರಿಗೆ ಸಚಿವ ಆರ್. ರಾಮಲಿಂಗಾರೆಡ್ಡಿ ಸೋಮವಾರ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ.

ಸದಸ್ಯ ದೊಡ್ಡರಂಗೇಗೌಡ ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರ ಒದಗಿಸಿದ್ದಾರೆ. `ಪ್ರಧಾನ ಮಂತ್ರಿ ಮತ್ತು ಪೆಟ್ರೋಲಿಯಂ ಸಚಿವರು ಇಬ್ಬರಿಗೂ ಮನವಿ ಮಾಡಲಾಗಿದೆ. ಬಸ್ಸುಗಳಿಗೆ ಟೋಲ್ ದರವನ್ನು ರದ್ದುಪಡಿಸುವ ಕುರಿತು ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚೆ ನಡೆಸಲಾಗುವುದು' ಎಂದು ಹೇಳಿದ್ದಾರೆ.

`ಮಾಸಿಕ ಪಾಸ್‌ಗಳಿಗೆ ಇನ್ನಷ್ಟು ರಿಯಾಯಿತಿ ನೀಡಲು ಸಾಧ್ಯವಿಲ್ಲ. ವೇತನ ಪರಿಷ್ಕರಣೆ ಮತ್ತು ತುಟ್ಟಿ ಭತ್ಯೆ ವಿಲೀನದ ಪರಿಣಾಮ ಸಾರಿಗೆ ಸಂಸ್ಥೆಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬಿದ್ದಿದೆ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT