ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡೂರು: ಕೋಳಿ ವ್ಯಾಪಾರಿಗಳ ಧರಣಿ

Last Updated 13 ಜೂನ್ 2011, 19:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕಡೂರು ಪಟ್ಟಣದಲ್ಲಿ ಕೋಳಿ ಅಂಗಡಿಗಳನ್ನು ತೆರವುಗೊಳಿಸುವಾಗ ಅಂಗಡಿಗಳಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋದವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಕಡೂರು ಪಟ್ಟಣದ ಕೋಳಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.

ಕಡೂರು ಪೊಲೀಸರು ಮತ್ತು ಪುರಸಭೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಧಿಕ್ಕಾರ ಕೂಗಿದರು.  ಅಂಗಡಿಗಳನ್ನು ತೆರವುಗೊಳಿಸು ವಾಗ ತೆಗೆದುಕೊಂಡಿರುವ ವಸ್ತುಗಳನ್ನು ವಾಪಸ್ ಕೊಟ್ಟಿಲ್ಲ ಎಂದು ದೂರಿದ ದರು. ಡಿಎಸ್‌ಎಸ್ ಸಂಚಾಲಕ ಎಂ.ಟಿ.ಶ್ರೀನಿವಾಸ, ಜಿಲ್ಲಾ ಸಂಘಟನಾ ಸಂಚಾಲಕ ಬಿ.ಎನ್.ಚೌಡಪ್ಪ, ಕೋಳಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಸ್.ಕುಮಾರ್, ಲೋಕೇಶ್ ಧರಣಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT