ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣಿವೆ ರಾಜ್ಯದಲ್ಲಿ ರಾಹುಲ್ ಗಾಂಧಿ

Last Updated 5 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ):  `ಜಮ್ಮು-ಕಾಶ್ಮೀರದ ಯುವಜನತೆಯೊಂದಿಗೆ ಸುದೀರ್ಘ ಬಾಂಧವ್ಯ ರೂಪಿಸಿಕೊಳ್ಳುವುದಕ್ಕೆ ಹಾಗೂ ಅವರ ಆಶೋತ್ತರಗಳನ್ನು ಈಡೇರಿಸುವುದಕ್ಕೆ ಕೈಲಾದ ಪ್ರಯತ್ನ ಮಾಡುತ್ತೇನೆ~ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, `ಇಲ್ಲಿ ಪ್ರತಿಭಾವಂತ ಮಕ್ಕಳು ಇದ್ದಾರೆ. ಭವಿಷ್ಯದಲ್ಲಿ ಏನು ಸಾಧನೆ ಮಾಡಬಹುದು ಎನ್ನುವುದನ್ನು ನಾವು ಅವರಿಗೆ ತಿಳಿಸಿಕೊಡಬೇಕಾಗಿದೆ~ ಎಂದರು.

ಇಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ದೇಶದ ಪ್ರಮುಖ ಉದ್ಯಮಿಗಳೊಂದಿಗೆ ಆಗಮಿಸಿರುವ ರಾಹುಲ್, `ಉದ್ಯಮಿಗಳ ಜತೆ ಮಾತನಾಡಲು ವಿದ್ಯಾರ್ಥಿಗಳಿಗೆ ಅತೀವ ಸಂತೋಷವಾಗುತ್ತಿದೆ. ಇಲ್ಲಿನ ಮಕ್ಕಳ ಆಶೋತ್ತರಗಳನ್ನು ಈಡೇರಿಸಲು ನಾವು ಪ್ರಯತ್ನಿಸುತ್ತೇವೆ~ ಎಂದು ಹೇಳಿದರು.

ಇದಕ್ಕೂ ಮುನ್ನ ಜಮ್ಮು-ಕಾಶ್ಮೀರ ಎನ್‌ಎಸ್‌ಯುಐ (ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ರಾಷ್ಟ್ರೀಯ ಕಾರ್ಯಕಾರಿ ಸದಸ್ಯರೊಂದಿಗೆ ಮಾತನಾಡಿದ್ದ ರಾಹುಲ್, ` ಕಾಶ್ಮೀರದ ವಿದ್ಯಾರ್ಥಿ ಸಮುದಾಯದ ಹೃದಯ ಗೆಲ್ಲುವುದು ಮಹತ್ವದ್ದಾಗಿದೆ~ ಎಂದಿದ್ದರು.

ಇಲ್ಲಿನ ವಿದ್ಯಾರ್ಥಿ ನಿಯೋಗವನ್ನು ದೆಹಲಿಗೆ ಕರೆತಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್ ಅವರನ್ನು ಭೇಟಿ ಮಾಡಿಸುವಂತೆ ರಾಜ್ಯ ಎನ್‌ಎಸ್‌ಯುಐ ಘಟಕ್ಕೆ ತಿಳಿಸಿದರು.

ಟಾಟಾ-ಒಮರ್ ಭೇಟಿ
ಟಾಟಾ ಸಮೂಹದ ಅಧ್ಯಕ್ಷ ರತನ್ ಟಾಟಾ ಶುಕ್ರವಾರ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ತಮ್ಮ ಸಮೂಹದ ಚಟುವಟಿಕೆ ವಿಸ್ತರಿಸುವ ಇಂಗಿತ ವ್ಯಕ್ತಪಡಿಸಿದರು.

`ಮಾಹಿತಿ ತಂತ್ರಜ್ಞಾನ, ಅತಿಥಿ ಸತ್ಕಾರ, ಕೃಷಿ ಉತ್ಪನ್ನಗಳು ಹಾಗೂ ತೋಟಗಾರಿಕೆ ವಲಯದಲ್ಲಿ ಪರಸ್ಪರ ಸಹಕಾರದ ಸಾಧ್ಯತೆಗಳ ಬಗ್ಗೆ ಇಬ್ಬರೂ ಸಮಾಲೋಚನೆ ನಡೆಸಿದರು~ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT