ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕದಲೂರು:ಕುಡಿಯಲು ಟ್ಯಾಂಕರ್ ನೀರು

Last Updated 13 ಅಕ್ಟೋಬರ್ 2012, 5:15 IST
ಅಕ್ಷರ ಗಾತ್ರ

ಮದ್ದೂರು: ಕದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗಿದ್ದು, ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಆರ್.ಮಹೇಶ್ ತಿಳಿಸಿದರು.

ಸಮೀಪದ ಕದಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗ್ರಾಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ನಿಡಘಟ್ಟ ವ್ಯಾಪ್ತಿಯಲ್ಲಿ 9ಲಕ್ಷ ರೂಪಾಯಿಗೂ ಹೆಚ್ಚು ಅನುದಾನದಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.

ಮಾದರಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿರುವ ಬಗೆಗೆ ಗ್ರಾಮಸಭೆಯಲ್ಲಿ ಗ್ರಾಮಸ್ಥರು ದೂರು ನೀಡಿದರು.

ಇದೇ ಸಂದರ್ಭದಲ್ಲಿ ಶೌಚಾಲಯ, ಆಶ್ರಯಮನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಜನರು ಅರ್ಜಿ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕರಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ರವಿ ಮಾತನಾಡಿದರು. ಸದಸ್ಯರಾದ ಶಿವಣ್ಣ, ಪದ್ಮ, ದಿವ್ಯ, ವೆಂಕಟೇಶ್, ಮಾದರಹಳ್ಳಿ ಶಿವಣ್ಣ, ಜವರೇಗೌಡ, ಶಿವಣ್ಣ, ನೊಡೆಲ್ ಅಧಿಕಾರಿ ರಾಜು, ಪಿಡಿಓ ಮಂಜುನಾಥ್, ಕಾರ್ಯದರ್ಶಿ ಪುಟ್ಟಸ್ವಾಮಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT