ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ಕೂಲಿಗೆ ಬಿಸಿಯೂಟ ನೌಕರರ ಆಗ್ರಹ

Last Updated 3 ಫೆಬ್ರುವರಿ 2011, 19:00 IST
ಅಕ್ಷರ ಗಾತ್ರ


ಕೋಲಾರ: ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿಗೆ ಕನಿಷ್ಠ ಕೂಲಿ ನೀಡುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ನೂರಾರು ಮಹಿಳೆಯರು ನಗರದಲ್ಲಿ ಗುರುವಾರ ‘ಜಿಲ್ಲಾ ಪಂಚಾಯಿತಿ ಚಲೋ’ ನಡೆಸಿದರು.

ನಗರದ ಪ್ರವಾಸಿ ಮಂದಿರದಿಂದ ಹೊರಟ ಮಹಿಳೆಯರು ಎಂ.ಜಿ. ರಸ್ತೆ ಮೂಲಕ ಪಂಚಾಯಿತಿ ತಲುಪಿ  ಅಲ್ಲಿ  ಧರಣಿ ನಡೆಸಿದರು.ಬಿಸಿಯೂಟ ನೌಕರರಿಗೆ ಕೆಲಸದ ಭದ್ರತೆ ಒದಗಿಸಿ ವಿಶೇಷ ಸೇವಾ ನಿಯಮಾವಳಿ ರಚಿಸಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಪ್ರಕ್ರಿಯೆ ನಿಲ್ಲಬೇಕು. ಪ್ರತಿ ತಿಂಗಳ ಮೊದಲ ವಾರದಲ್ಲೆ ಸಂಬಳ ನೀಡಬೇಕು.ಎಸ್‌ಡಿಎಂಸಿಗಳಿಂದ ಅಧಿಕಾರ ದುರುಪಯೋಗ ವಾಗುವುದನ್ನು ತಡೆಯಬೇಕು. ಖಾಸಗಿ ಸೇವಾ ಸಂಸ್ಥೆಗಳಿಗೆ ಯೋಜನೆ ಗುತ್ತಿಗೆ ನೀಡಬಾರದು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT