ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ವೇತನಕ್ಕೆ ಆಗ್ರಹಿಸಿ ಕಾರ್ಮಿಕರ ಮುತ್ತಿಗೆ

Last Updated 20 ಡಿಸೆಂಬರ್ 2012, 8:33 IST
ಅಕ್ಷರ ಗಾತ್ರ

ಗೋಕಾಕ: ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬುಧವಾರ ಇಲ್ಲಿಯ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಪಂಚಾಯತ ನೌಕರರ ಸಂಘದ  ಕಲ್ಲಪ್ಪ ಮಾದರ ನೇತೃತ್ವದಲ್ಲಿ ನೆರೆದ ಪದಾಧಿಕಾರಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ  ಎಲ್ಲ ಕಾರ್ಮಿಕರಿಗೆ ಕನಿಷ್ಠ ವೇತನ 10 ಸಾವಿರ ರೂಪಾಯಿಗಳನ್ನು  ನೀಡುವಂತೆ ಒತ್ತಾಯಿಸಿದರು. ಬಡವರಿಗೆ ಪಡಿತರ ವ್ಯವಸ್ಥೆ ಮೂಲಕ ನೀಡಲಾಗುತ್ತಿರುವ ಆಹಾರ ಧಾನ್ಯ ಪದಾರ್ಥಗಳು ಸರಿಯಾಗಿ ದೊರೆಯುತ್ತಿಲ್ಲ ಎಂದು ಆರೋಪಿಸಿ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೊಡ್ಡವ್ವ ಪೂಜಾರಿ,  ವೆಂಕವ್ವ ಖಾನಟ್ಟಿ, ಬಸವರಾಜ ಆರ್ಯನವರ ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT