ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಭಾಷೆ ಅಪಾಯದಲ್ಲಿ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪರ ಭಾಷೆ ಹಾವಳಿ, ಇನ್ನಿತರ ಕಾರಣಗಳಿಂದ ಕನ್ನಡ ಭಾಷೆ ಅಪಾಯದ ಸ್ಥಿತಿಯನ್ನು ಎದುರಿಸುತ್ತಿದೆ. ಆದರೆ ಕನ್ನಡ ಭಾಷೆ ಮತ್ತು ಸಂಸ್ಕೃತಿ ಆಳವಾಗಿ ಬೇರೂರಿದೆ. ಇದನ್ನು ಸುಲಭವಾಗಿ ದುರ್ಬಲ ಮಾಡಲಾಗದು ಎಂಬುದನ್ನು ಸಾಬೀತುಪಡಿಸಬೇಕಿದೆ ಎಂದು ಶಿಕ್ಷಣ ತಜ್ಞ ಪ್ರೊ.ಕೋಡಿರಂಗಪ್ಪ ಗುರುವಾರ ಇಲ್ಲಿ ತಿಳಿಸಿದರು.

 ನಗರದಲ್ಲಿ ಅನನ್ಯ ಕಲಾ ರಂಗ ವೇದಿಕೆ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕನ್ನಡ ಕಲಿಕಾ ಕೇಂದ್ರ ತರಬೇತಿ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿ, `ಕನ್ನಡ ಮತ್ತು ಕನ್ನಡತನದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಿದೆ~ ಎಂದರು.

`ಅಲ್ಪಸಂಖ್ಯಾತ ಸಮುದಾಯದವರು ಭಾಷಾ ಸಮಸ್ಯೆ ಮತ್ತು ಇನ್ನಿತರ ಕಾರಣಗಳಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದಿಲ್ಲ. ಆ ಸಮುದಾಯದ ಜನರು ಈ ರೀತಿಯ ಶಿಬಿರದ ಪ್ರಯೋಜನ ಪಡೆಯಬೇಕು. ತಾವು ಕಲಿಯುವುದಲ್ಲದೆ ಕುಟುಂಬ ಸದಸ್ಯರಿಗೂ ಕನ್ನಡದ ಜ್ಞಾನ ನೀಡಬೇಕು~ ಎಂದು ಅವರು ತಿಳಿಸಿದರು.

`ಮುಸ್ಲಿಂ ಸಮುದಾಯದ ಬಹುತೇಕರು ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ಸಲ್ಲಿಸಿದ್ದಾರೆ. ಪ್ರತಿಯೊಬ್ಬರು ಕನ್ನಡ ಕಲಿತರೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆ ಸಲ್ಲಿಸಲು ಸಾಧ್ಯವಾಗುತ್ತದೆ~ ಎಂದು ಹೇಳಿದರು. 

ಸಂಪನ್ಮೂಲ ಶಿಕ್ಷಕ ಅಬ್ದುಲ್ ಫಾರೂಖ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶಹನಾಜ್ ಬೇಗಂ, ಮುಖ್ಯ ಶಿಕ್ಷಕಿ ನಜೀಮುನ್ನಿಸಾ, ಅನನ್ಯ ಕಲಾ ರಂಗ ವೇದಿಕೆ ಅಧ್ಯಕ್ಷ ಗಾನಾ ಅಶ್ವತ್ಥ್, ಸದಸ್ಯೆ ಎಂ.ಎನ್.ರಾಜಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT