ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಮಂಗಲ ಶಾಲಾ ಮುಖ್ಯಶಿಕ್ಷಕ ಅಮಾನತು

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಚನ್ನಪಟ್ಟಣ: ಕರ್ತವ್ಯಲೋಪ ಹಾಗೂ ದುರ್ನಡತೆಯ ಹಿನ್ನಲೆಯಲ್ಲಿ ಕನ್ನಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಹ್ಲಾದಗೌಡ ಆದೇಶ ಹೊರಡಿಸಿದ್ದಾರೆ.

ಪ್ರತಿದಿನ ಮಧ್ಯಪಾನ ಮಾಡಿ ಶಾಲೆಗೆ ತಡವಾಗಿ ಬರುತ್ತಿದ್ದಲ್ಲದೆ ಮಕ್ಕಳ ಕಲಿಕಾ ಅಭಿವೃದ್ಧಿಗೆ ಅಡ್ಡಿಯುಂಟುಮಾಡುತ್ತಿದ್ದರು ಹಾಗೂ ಪದೇ ಪದೇ ಶಾಲಾ ಕರ್ತವ್ಯದ ಸಮಯದಲ್ಲಿ ಗೈರು ಹಾಜರಾಗುತ್ತಿದ್ದ ಕಾರಣಕ್ಕೆ ಇವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

 ಶಾಲೆಗೆ ಪಾನಮತ್ತರಾಗಿ ಹಾಜರಾಗಿದ್ದ ಸಂದರ್ಭದಲ್ಲಿ ಈತನನ್ನು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ  ತಪಾಸಣೆ ಮಾಡಿಸಿದಾಗ ಪಾನಮತ್ತನಾಗಿ ಹಾಜರಾಗಿರುವುದು ರುಜುವಾತಾಗಿದೆ ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನಯ್ಯ ಕರ್ನಾಟಕ ಸಿವಿಲ್ ಸೇವಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದು, 1957ರ ಅಧಿಕಾರದನ್ವಯ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪ್ರಹ್ಲಾದಗೌಡ ಶಿಕ್ಷಕ ಮಲ್ಲಿಕಾರ್ಜುನಯ್ಯನನ್ನು ಸೇವೆಯಿಂದ ಅಮಾನರು ಗೊಳಿಸಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT