ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪುಪಟ್ಟಿ ಧರಿಸಿ ನೌಕರರ ಪ್ರತಿಭಟನೆ

Last Updated 12 ಮಾರ್ಚ್ 2011, 10:40 IST
ಅಕ್ಷರ ಗಾತ್ರ

ಜನವಾಡ: ಕಾರ್ಖಾನೆ ನಿರ್ಮಾಣದಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತ ನೌಕರರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನೌಕರರು ಬೀದರ್ ತಾಲ್ಲೂಕಿನ ಜನವಾಡ ಸಮೀಪ ಇರುವ ಕಾರ್ಖಾನೆಯ ಮುಖ್ಯ ದ್ವಾರದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.ಕಳೆದ ಎಂಟು ದಿನಗಳಿಂದ ಧರಣಿ ನಡೆಸುತ್ತಿರುವ ನೌಕರರು ಮಂಗಳವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು. ಕಾರ್ಖಾನೆಯ ಆಡಳಿತ ಮಂಡಳಿ ವಿರುದ್ಧ ಘೋಷಣೆಗಳನ್ನು ಹಾಕಿದರು. ವ್ಯವಸ್ಥಾಪಕ ನಿರ್ದೇಶಕರ ಪ್ರತಿಕೃತಿ ದಹನಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು.

ಜಮೀನು ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕಾಯಂ ನೌಕರಿ ನೀಡುವ ಬಗ್ಗೆ ಕಾರ್ಖಾನೆ ಉಪ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ 35 ಜನರಿಗೆ ಕಾರ್ಖಾನೆಯಲ್ಲಿ ತಾತ್ಕಾಲಿಕ ಉದ್ಯೋಗ ಕಲ್ಪಿಸಲಾಗಿದೆ. ಆದರೆ, ಕಾಯಂಗೊಳಿಸದೇ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಸರ್ಕಾರ ಹಾಗೂ ಕಾರ್ಖಾನೆಯ ಆಡಳಿತ ಮಂಡಳಿ ಈ ಕಡೆಗೆ ಗಮನ ಹರಿಸುತ್ತಿಲ್ಲ. ಕಾರ್ಮಿಕ ಕಾಯ್ದೆ ಹಾಗೂ ನಿಯಮಗಳನ್ನು ಗಾಳಿಗೆ ತೂರಿ ನೌಕರರನ್ನು ಮನಬಂದಂತೆ ಶೋಷಣೆ ಮಾಡಲಾಗುತ್ತಿದೆ ಎಂದು ಆಪಾದಿಸಿದರು.

ದಿನಗೂಲಿ ನೌಕರರಿಗೆ ಸದ್ಯ ನೀಡಲಾಗುತ್ತಿರುವ 100 ರೂಪಾಯಿಯ ಕೂಲಿಯನ್ನು 150 ಕ್ಕೆ ಹೆಚ್ಚಿಸಬೇಕು. ಹುದ್ದೆಗೆ ಅನುಗುಣವಾಗಿ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಮಂಡಿಸಿದ್ದಾರೆ.ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನೌಕರರ ಸಂಘದ ಅಧ್ಯಕ್ಷ ಮನೋಜ ಪಾಂಡ್ರೆ, ಉಪಾಧ್ಯಕ್ಷ ಶಂಕರ ಶೀರಾಪುರೆ, ಯಶವಂತ ಜಾಧವ, ಪ್ರಮುಖರಾದ ಬಾಲಾಜಿ ಲವಟೆ, ಸೂರ್ಯಕಾಂತ ಎಚ್, ಕಿಸಾನಸಭಾ ಉಪಾಧ್ಯಕ್ಷ ಪ್ರಕಾಶ ಕುಶನೂರೆ, ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ಶಿವರಾಜ ನೇಳಗಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT