ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪುಹಣ ವಶಕ್ಕೆ ಆಗ್ರಹ

Last Updated 10 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಕನಕಪುರ: ದೇಶದಲ್ಲಿನ ಭ್ರಷ್ಟಾಚಾರ ಕೊನೆಗೊಳಿಸಿ, ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಲು ಹೊರ ರಾಷ್ಟ್ರಗಳಲ್ಲಿ ಅಕ್ರಮವಾಗಿ ಕೂಡಿಟ್ಟಿರುವ ಕಪ್ಪುಹಣವನ್ನು ವಶಪಡಿಸಿಕೊಳ್ಳುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಭಾರತ ಸ್ವಾಭಿಮಾನ ಆಂದೋಲನ ಸಮಿತಿ ಆಗ್ರಹಿಸಿದೆ.

ಈ ಕುರಿತು ಆಂದೋಲನ ಸಮಿತಿಯ ಡಿ.ಬಾಲಕೃಷ್ಣ ಆರ್ಯ ಪತ್ರಿಕಾ ಹೇಳಿಕೆ ನೀಡಿದ್ದು, ಪತಂಜಲಿ ಯೋಗ ಸಮಿತಿ ಮತ್ತು ಭಾರತ ಸ್ವಾಭಿಮಾನ ಆಂದೋಲನ ಸಮಿತಿ ಆಶ್ರಯದಲ್ಲಿ, ಪ್ರಧಾನ ಮಂತ್ರಿ ಹಾಗೂ ರಾಷ್ಟ್ರಪತಿಗಳಿಗೆ  ಪತ್ರದ ಮುಖೇನ ಕಪ್ಪುಹಣ ತರಿಸಿಕೊಳ್ಳುವ ಬಗ್ಗೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ ಪತ್ರದೊಂದಿಗೆ ರಾಮನಗರ ಜಿಲ್ಲೆಯ 13 ಸಾವಿರ ನಾಗರಿಕರ ಸಹಿಯುಳ್ಳ 686 ಪ್ರತಿಗಳನ್ನು ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ಅವರ ಮನವಿ ಪತ್ರವನ್ನು ಲಗತ್ತಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT